ಹುಬ್ಬಳ್ಳಿ : ಕಳೆದ ಎರಡು ವರ್ಷಗಳ ಹಿಂದೆ ಅಂದರೆ 2022 ರಲ್ಲಿ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಅನ್ನು ಇತ್ತೀಚಿಗೆ ರಾಜ್ಯ ಸರ್ಕಾರ ಹಿಂಪಡೆದಿತ್ತು. ಈ ಒಂದು ವಿಚಾರವಾಗಿ ಬಿಜೆಪಿ ನಾಯಕರು ತೀವ್ರವಾಗಿ ಖಂಡಿಸಿದರು. ಅಲ್ಲದೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹುಬ್ಬಳ್ಳಿಗೆ ಭೇಟಿ ನೀಡಿದಾಗ ಹಲವು ಬಿಜೆಪಿ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಕಾರಿಗೆ ಕಪ್ಪುಪಟ್ಟಿ ಪ್ರದರ್ಶಿಸಿದ ಘಟನೆ ನಡೆಯಿತು.
ರಾಜ್ಯ ಸರ್ಕಾರ ಹಳೆ ಹುಬ್ಬಳ್ಳಿ ಗಲಭೆ ಕೇಸ್ ಹಿಂಪಡೆದ ವಿಚಾರವಾಗಿ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಇಂದು ಸಿಎಂ ಸಿದ್ದರಾಮಯ್ಯ ಕಾರಿಗೆ ಬಿಜೆಪಿ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿದರು. ಹುಬ್ಬಳ್ಳಿಯ ಗೋಕುಲ್ ರೋಡ್ ನಲ್ಲಿ ಕಪ್ಪು ಬಟ್ಟೆ ಪ್ರದರ್ಶಿಸಿದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.ಬಿಜೆಪಿ ಕಾರ್ಯಕರ್ತರಾದ ಜಗದೀಶ್ ಕಂಬಳಿ, ಮಂಜುನಾಥ್ ಮತ್ತು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.