ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಮೈಸೂರಿನಲ್ಲಿ ಒಂದು ತಿಂಗಳ ಪರ್ಯಂತ ಅನೇಕ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗುತ್ತವೆ. ಅದರಲ್ಲಿ ಫಲಪುಷ್ಪ ಪ್ರದರ್ಶನ ಕೂಡ ಒಂದು. ಇದೀಗ ಈ ಒಂದು ಫಲ ಪುಷ್ಪ ಪ್ರದರ್ಶನದಲ್ಲಿ ಉಚಿತ ಪ್ರವೇಶ ಇದ್ದರೂ ಕೂಡ ಸಿಬ್ಬಂದಿಗಳು ಪ್ರವಾಸಿಗರಿಂದ ಅಕ್ರಮ ಹಣವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಹೌದು ಮೈಸೂರು ಫಲ ಪುಷ್ಪ ಪ್ರದರ್ಶನದಲ್ಲಿ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಸಿಬ್ಬಂದಿಗಳು ಟಿಕೆಟ್ ನೀಡಿ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದೆ. ಕಳೆದ ಹತ್ತು ದಿನಗಳಿಗೆ ಮಾತ್ರ ಟಿಕೆಟ್ ಪಡೆದು ವೀಕ್ಷಣೆಗೆ ಅವಕಾಶ ನೀಡಲಾಗಿತ್ತು. ಅದಾದ ಬಳಿಕ ಉಚಿತ ಪ್ರವೇಶ ಇದ್ದರೂ ಕೂಡ ಅಕ್ರಮವಾಗಿ ಸಿಬ್ಬಂದಿಗಳು ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪ ಕೇಳಿ ಬಂದಿದೆ.
ಇಂದು ಸಹ ಸಾಕಷ್ಟು ಸಂಖ್ಯೆಯಲ್ಲಿ ಪ್ರವಾಸಿಗರು ಪ್ರದರ್ಶನಕ್ಕೆ ಆಗಮಿಸಿದ್ದಾರೆ.ಪ್ರವಾಸಿಗರಿಗೆ ಸಿಬ್ಬಂದಿಗಳು ಟಿಕೆಟ್ ನೀಡಿ ಅಕ್ರಮವಾಗಿ ಹಣ ವಸೂಲಿ ಮಾಡುತ್ತಿದ್ದಾರೆ ಈ ಕುರಿತು ಪ್ರಶ್ನೆ ಮಾಡಿದವರ ಮೇಲೆ ಹಲ್ಲೆ ಕೂಡ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.