ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾಧ್ಯಂತ ಇನ್ನೂ ಒಂದು ವಾರ ಮಳೆಯಾಗಲಿ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮುಂದಿನ 24 ಗಂಟೆಯಲ್ಲಿ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಹಾವೇರಿ, ಬೆಳಗಾವಿ, ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕೊಡಗು, ಮೈಸೂರು, ತುಮಕೂರು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಂಭವವಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ಕರಾವಳಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗರುದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂಬುದಾಗಿ ತಿಳಿಸಿದೆ.
ಬೆಂಗಳೂರಿನಲ್ಲೂ ಮುಂದಿನ 24 ಗಂಟೆಯಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂಬುದಾಗಿ ಹೇಳಿದೆ.
ಸವದತ್ತಿ ರೇಣುಕಾ ಯಲ್ಲಮ್ಮ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯ ಒದಗಿಸಲು ತೀರ್ಮಾನ: ಸಿಎಂ ಸಿದ್ಧರಾಮಯ್ಯ
‘ಮರುಪಾವತಿ ಆಯ್ಕೆ, ಆಟೋ ಸವಾರಿ ರಸೀದಿ’ ನೀಡಲು ‘ಓಲಾ ಅಪ್ಲಿಕೇಶನ್’ಗೆ ‘CCPA’ ಆದೇಶ