ನವದೆಹಲಿ: ಬಿಜೆಪಿಯಿಂದ ಜಮ್ಮು-ಕಾಶ್ಮೀರದಲ್ಲಿ ಸರ್ಕಾರ ರಚಿಸಲು ಎಲ್ಲಾ ಸಿದ್ಧತೆ ತಯಾರಿ ನಡೆಯುತ್ತಿವೆ. ಈ ನಡುವೆ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ವೀಕ್ಷಕರಾಗಿ ಬಿಜೆಪಿಯಿಂದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರನ್ನು ನೇಮಕ ಮಾಡಲಾಗಿದೆ.
ಇಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಆದೇಶ ಹೊರಡಿಸಿದ್ದಾರೆ. ಅದರ್ಲಲಿ ಭಾರತೀಯ ಜನತಾ ಪಕ್ಷದ ಸಂಸದೀಯ ಮಂಡಳಿಯು ಗೌರವಾನ್ವಿತ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ತರುಣ್ ಚುಗ್ ಅವರನ್ನು ಜಮ್ಮು ಮತ್ತು ಕಾಶ್ಮೀರದಲ್ಲಿ ಪಕ್ಷದ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗಾಗಿ ಕೇಂದ್ರ ವೀಕ್ಷಕರಾಗಿ ನೇಮಿಸಿದೆ ಎಂದು ತಿಳಿಸಿದ್ದಾರೆ.
ಸವದತ್ತಿ ರೇಣುಕಾ ಯಲ್ಲಮ್ಮ ಕ್ಷೇತ್ರದಲ್ಲಿ ಗುಣಮಟ್ಟದ ಮೂಲಸೌಕರ್ಯ ಒದಗಿಸಲು ತೀರ್ಮಾನ: ಸಿಎಂ ಸಿದ್ಧರಾಮಯ್ಯ
‘ಮರುಪಾವತಿ ಆಯ್ಕೆ, ಆಟೋ ಸವಾರಿ ರಸೀದಿ’ ನೀಡಲು ‘ಓಲಾ ಅಪ್ಲಿಕೇಶನ್’ಗೆ ‘CCPA’ ಆದೇಶ