ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೌಟ್ಯಾಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ದಂತೆ ಇಂದು ಶಾಸಕ ಬಿ ನಾಗೇಂದ್ರ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬಿ ನಾಗೇಂದ್ರ ಅವರ ಜಾಮೀನು ಅರ್ಜಿ ವಿಚಾರಣೆ ಇಂದು ನಡೆಯಲಿದೆ.
ಹೌದು ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಂತಹ ಕೋಟ್ಯಾಂತರ ರೂಪಾಯಿ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ. ಈ ಪ್ರಕರಣದಲ್ಲಿ ಶಾಸಕ ಬಿ ನಾಗೇಂದ್ರ ಅವರನ್ನು ಇಡಿ ಅಧಿಕಾರಿಗಳು ಬಂಧಿಸಿದ್ದರು. ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಿ. ನಾಗೇಂದ್ರ ಇದ್ದಾರೆ.
ಪ್ರಕರಣದ ಸಂಬಂಧಪಟ್ಟಂತೆ ಎಲ್ಲ ರೀತಿಯ ವಿಚಾರಣೆ ಮಾಡಿದ್ದು, ಇಡಿ ಮಾಹಿತಿಗಳನ್ನು ಸಂಗ್ರಹಿಸಿದ್ದಾರೆ. ಅಲ್ಲದೆ ಚಾರ್ಜ್ ಶೀಟ್ ನಲ್ಲಿ ಈ ಹಗರಣದ ಮಾಸ್ಟರ್ ಮೈಂಡ್ ಬಿ ನಾಗೇಂದ್ರ ಎಂದು ಇಡಿ ಅಧಿಕಾರಿಗಳು ಉಲ್ಲೇಖಿಸಿದ್ದಾರೆ ಹೀಗಾಗಿ ಇಂದು ಬಿ ನಾಗೇಂದ್ರ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಅವರ ಭವಿಷ್ಯ ಏನಾಗಲಿದೆ ಎಂದು ನ್ಯಾಯಾಲಯದ ತೀರ್ಪು ಬಂದ ಬಳಿಕ ಗೊತ್ತಾಗಲಿದೆ.