ಧಾರವಾಡ : ಇಂದು ಲೋಕಾಯುಕ್ತ ಅಧಿಕಾರಿಗಳು ಧಾರವಾಡ ನಗರದ ಹೊಸ ಬಸ್ ನಿಲ್ದಾಣದ ಮೇಲೆ ದಾಳಿ ಮಾಡಿದರು. ಸಾರ್ವಜನಿಕರಿಂದ ನಿಲ್ದಾಣದ ಸ್ವಚ್ಛತೆ ಹಾಗೂ ಇತರೆ ವಿಷಯಗಳ ಕುರಿತಾಗಿ ದೂರು ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಹೌದು ಧಾರವಾಡ ಹೊಸ ಬಸ್ ನಿಲ್ದಾಣದ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಬಸ್ ನಿಲ್ದಾಣದ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ವೆಂಕಟನಗೌಡ ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೊಸ ಬಸ್ ನಿಲ್ದಾಣದ ನಿರ್ವಹಣೆ ಮತ್ತು ಸ್ವಚ್ಛತೆಯ ಕುರಿತು ಅಧಿಕಾರಿಗಳು ಫೈಲ್ ಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.