ಬೆಂಗಳೂರು: ನಾನು ಬೌದ್ಧ ಧರ್ಮ ಸ್ವೀಕರಿಸುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ಘೋಷಿಸಿದ್ದಾರೆ.
ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ, ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ ಎಂದಿದ್ದಾರೆ.
ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ Star ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು ಹೇಳಿ ತನ್ನ 3.5 ಲಕ್ಷ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ ಧಮ್ಮ ಚಕ್ರ ಪರಿವರ್ತನಾ ದಿನದಂದು ಎಲ್ಲರಿಗೂ ನನ್ನ ಆತ್ಮೀಯ ಶುಭಾಶಯಗಳು ಎಂಬುದಾಗಿ ತಿಳಿಸಿದ್ದಾರೆ.
ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ, ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ.
ಆದರೆ ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ Star ಕಾಣುತ್ತಿಲ್ಲ. ಹೀಗಾಗಿ ನಾನು… pic.twitter.com/oczHPF6ugr
— Dr H C Mahadevappa(Buddha Basava Ambedkar Parivar) (@CMahadevappa) October 14, 2024
ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
BREAKING ; ದೆಹಲಿ ಸಿಎಂ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ‘ಪ್ರಧಾನಿ ಮೋದಿ’ ಭೇಟಿಯಾದ ‘ಅತಿಶಿ’