ಬಳ್ಳಾರಿ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಲೋಕಾಯುಕ್ತ ಹಾಗೂ ಇಡಿ ಅಧಿಕಾರಿಗಳು ತನಿಖೆಯನ್ನು ಪ್ರಾರಂಭಿಸಿವೆ. ಯಾವಾಗ ಸಿಎಂ ಸಿದ್ದರಾಮಯ್ಯ ಅವರಿಗೆ ಸಂಕಷ್ಟ ಎದರಾಯ್ತೋ ಪತ್ನಿ ಪಾರ್ವತಿ ಮುಡಾಗೆ 14 ನಿವೇಶನಗಳನ್ನು ಹಿಂತಿರುಗಿಸಿದ್ದಾರೆ. ಇದರ ಮಧ್ಯ ಸಿಎಂ ಸಿದ್ದರಾಮಯ್ಯ ಅವರು ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆನೂ ಕೊಡಲ್ಲ ಎಂದು ಮತ್ತೊಮ್ಮೆ ಪುನರುಚ್ಚಿಸಿದ್ದಾರೆ.
ಇಂದು ಬಳ್ಳಾರಿ ಜಿಲ್ಲೆಯ ಸಂಡೂರು ಪಟ್ಟಣದಲ್ಲಿ ಸಾಧನಾ ಸಮಾವೇಶದಲ್ಲಿ ಮಾತನಾಡಿದ ಅವರು, ನಾನು ಯಾವುದೇ ತಪ್ಪು ಮಾಡಿಲ್ಲ ರಾಜೀನಾಮೆ ಕೊಡುವುದಿಲ್ಲ. ಬಿಜೆಪಿ ನನ್ನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಅಧಿಕಾರಕ್ಕೆ ಬಂದ 8 ತಿಂಗಳಿನಲ್ಲಿ 5 ಗ್ಯಾರಂಟಿಗಳು ಜಾರಿ ಮಾಡಿದ್ದೇವೆ. ಗ್ಯಾರಂಟಿ ಯೋಜನೆಗೆ 56,000 ಕೋಟಿ ಖರ್ಚು ಮಾಡುತ್ತಿದ್ದೇವೆ. ಸರ್ಕಾರದ ಬಳಿ ಹಣವಿಲ್ಲ ಎಂದು ಬಿಜೆಪಿಯವರು ಸುಳ್ಳು ಹೇಳುತ್ತಿದ್ದಾರೆ ಎಂದು ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.