ಬಳ್ಳಾರಿ : ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯವು ನಟ ದರ್ಶನ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ಬಳಿಕ, ವಾದ ಪ್ರತಿವಾದ ಆಲಿಸಿ, ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶ ಹೊರಡಿಸಿತು.
ನಟ ದರ್ಶನ್ ಜಾಮೀನು ಅರ್ಜಿ ವಜಾ ಆದ ವಿಷಯ ತಿಳಿಯುತ್ತಿದ್ದಂತೆ ವಿಜಯಲಕ್ಷ್ಮಿ ಅವರು ಕಣ್ಣೀರು ಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ಹೌದು ಅತಿಯಾ ಜಾಮಿನ್ ಅರ್ಜಿ ವಜಾ ಆದ ಬೆನ್ನಲ್ಲೇ ಪ್ರತಿ ವಿಜಯಲಕ್ಷ್ಮಿ ಕಣ್ಣೀರು ಹಾಕಿದ್ದಾರೆ. ಬಳ್ಳಾರಿ ಖಾಸಗಿ ಹೋಟೆಲಲ್ಲಿ ತಂಗಿದ್ದ ಪ್ರತಿಮೆ ಜಯಲಕ್ಷ್ಮಿ ಕಾನೂನು ಹೋರಾಟದ ಬಗ್ಗೆ ವಕೀಲರ ಜೊತೆಗೆ ಚರ್ಚಿಸುತ್ತಿದ್ದಾರೆ.
ಪ್ರತಿ ಬಾರಿ ನಟ ದರ್ಶನ್ ಅವರನ್ನು ಭೇಟಿ ಮಾಡಲು ವಿಜಯಲಕ್ಷ್ಮಿ ಅವರು ಜೈಲಿಗೆ ಆಗಮಿಸುತ್ತಿದ್ದರು. ಆದರೆ ಇವತ್ತು ಜೈಲಿಗೆ ಆಗಮಿಸದೆ ಖಾಸಗಿ ಹೋಟೆಲ್ ನಲ್ಲಿ ತಂಗಿದ್ದರು. ದರ್ಶನ್ ಅವರನ್ನು ಭೇಟಿಯಾಗಲು ನಟ ಧನ್ವೀರ್ ಅವರು ಬಳ್ಳಾರಿ ಜೈಲಿಗೆ ಆಗಮಿಸಿದ್ದರು. ಇತ್ತ ದರ್ಶನ್ ಜಾಮೀನು ಅರ್ಜಿ ವಜಾ ಬೆನ್ನಲ್ಲೇ ಪತ್ನಿ ವಿಜಯಲಕ್ಷ್ಮಿ ಕಣ್ಣೀರು ಹಾಕಿದ್ದಾರೆ.ಬಳಿಕ ಮುಂದಿನ ಕಾನೂನು ಹೋರಾಟದ ಕುರಿತು ವಕೀಲರ ಜೊತೆಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.