ಮಡಿಕೇರಿ: ಮೂರ್ನಾಡು ಗ್ರಾಮದ 33/11 ಕೆ.ವಿ ವಿದ್ಯುತ್ ಉಪ ಕೇಂದ್ರ ಹೊರಹೊಮ್ಮುವ ನಾಪೋಕ್ಲು ಮತ್ತು ಎಫ್5 ಹೊದ್ದೂರು ಫೀಡರ್‍ನಲ್ಲಿ ಅಕ್ಟೋಬರ್, 15 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಫೀಡರ್‍ನಲ್ಲಿ ತುರ್ತು ನಿರ್ವಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
ಆದ್ದರಿಂದ ನಾಪೋಕ್ಲು, ಕುಂಜಿಲ, ಕಕ್ಕಬೆ, ನಾಲಡಿ, ಯವಕಪಾಡಿ, ಕೊಟ್ಟಮುಡಿ, ಬೇತು, ಪಾಲೂರು, ಹೊದ್ದೂರು, ಹಳೆತಾಲೂಕು, ಎಮ್ಮೆಮಾಡು. ಬಲ್ಲಮಾವಟಿ, ಕೊಳಕೇರಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
ಭಾಗ್ಯ ಲಕ್ಷ್ಮಿ, ಸುಕನ್ಯಾ ಸಮೃದ್ಧಿ ಯೋಜನೆ ಕುರಿತು ಹೆಣ್ಣು ಮಕ್ಕಳ ಪೋಷಕರಿಗೆ ಮಹತ್ವದ ಮಾಹಿತಿ
ಗೃಹಲಕ್ಷ್ಮಿ’ ಫಲಾನುಭವಿಗಳ ಖಾತೆಗೆ 1 ತಿಂಗಳ ಹಣ ಜಮೆಯ ವಿಚಾರ : ಸ್ಪಷ್ಟನೆ ನೀಡಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್