ಮಡಿಕೇರಿ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ಬೆಳಗ್ಗೆ 7 ಗಂಟೆ 30 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ.
ತಲಕಾವೇರಿಯ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವು ಅಕ್ಟೋಬರ್ 17ರಂದು ಬೆಳಿಗ್ಗೆ 7.40ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ನಡೆಯಲಿದೆ.
ಅಕ್ಟೋಬರ್ 4ರಂದು ಬೆಳಿಗ್ಗೆ 10.21ಕ್ಕೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ‘ಆಜ್ಞಾ ಮುಹೂರ್ತ’ ನಡೆಯಲಿದೆ. ಅಕ್ಟೋಬರ್ 14ರಂದು ಬೆಳಿಗ್ಗೆ 11.35ಕ್ಕೆ ಸಲ್ಲುವ ಧನು ಲಗ್ನದಲ್ಲಿ ಅಕ್ಷಯ ಪಾತ್ರೆ… pic.twitter.com/o5PjeJhODT
— DIPR Karnataka (@KarnatakaVarthe) October 14, 2024
ತಲಕಾವೇರಿಯ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವವು ಅಕ್ಟೋಬರ್ 17ರಂದು ಬೆಳಿಗ್ಗೆ 7.40ಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ನಡೆಯಲಿದೆ. ಅಕ್ಟೋಬರ್ 4ರಂದು ಬೆಳಿಗ್ಗೆ 10.21ಕ್ಕೆ ಸಲ್ಲುವ ವೃಶ್ಚಿಕ ಲಗ್ನದಲ್ಲಿ ‘ಆಜ್ಞಾ ಮುಹೂರ್ತ’ ನಡೆಯಲಿದೆ. ಅಕ್ಟೋಬರ್ 14ರಂದು ಬೆಳಿಗ್ಗೆ 11.35ಕ್ಕೆ ಸಲ್ಲುವ ಧನು ಲಗ್ನದಲ್ಲಿ ಅಕ್ಷಯ ಪಾತ್ರೆ ಇರಿಸಲಾಗುತ್ತದೆ. ಅಂದು ಸಂಜೆ 4.15ಕ್ಕೆ ಸಲ್ಲುವ ಕುಂಭ ಲಗ್ನದಲ್ಲಿ ಕಾಣಿಕೆ ಡಬ್ಬಿ ಇರಿಸಲಾಗುತ್ತದೆ.