ಬೆಂಗಳೂರು : ನಾನು ಕೂಡ ಕಾಲೇಜಿನಲ್ಲಿ ಓದುತ್ತಿರುವಾಗ ಸಿಗರೇಟ್ ಸೇದತಿದ್ದೆ, ಬಳಿಕ ಶಾಸಕನಾದ ಮೇಲೆ ಸಿಗರೇಟ್ ಸೇದುವುದನ್ನು ಬಿಟ್ಟೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಾಲೇಜು ದಿನಗಳನ್ನು ನೆನಪಿಸಿಕೊಂಡರು.
ಇಂದು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ತಂಬಾಕು ಮುಕ್ತ ಯುವ ಅಭಿಯಾನ 2.0 ಕಾರ್ಯಕ್ರಮವನ್ನು ಉದ್ಘಾಟಿಸಿ ಜಾಗೃತಿ ಜಾಥಾಗೆ ಚಾಲನೆ ನೀಡಿ ಅವರು ಮಾತನಾಡಿ,ನಾನು ವಿದ್ಯಾರ್ಥಿಯಾಗಿದ್ದಾಗ ಸಿಗರೇಟ್ ಸೇದುತ್ತಿದ್ದೆ. ಆಮೇಲೆ ಶಾಸಕ ಆದ್ಮೇಲೆ ಬಿಟ್ಬಿಟ್ಟೆ ಎಂದು ಸಿಎಂ ಸಿದ್ದರಾಮಯ್ಯ ಅವರು ತಮ್ಮ ಕಾಲೇಜಿನ ಹಳೆಯ ದಿನಗಳನ್ನು ನೆನಪಿಸಿಕೊಂಡರು.
ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಧಾರವಾಡ ಗಳಲ್ಲಿ ಡ್ರಗ್ಸ್ ಬಳಕೆ ಹೆಚ್ಚಾಗುತ್ತಿದೆ. ಯುವ ಜನ ದುರಭ್ಯಾಸಗಳನ್ನು ಮಾಡಬಾರದು, ಮಾಡುತ್ತಿದ್ದರೆ ತಕ್ಷಣ ಬಿಡಬೇಕು. ಯುವಕ ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ದುಶ್ಚಟಗಳನ್ನು ನಿಲ್ಲಿಸಬೇಕು. ಹೀಗಾಗಿ ವಿದ್ಯಾರ್ಥಿಗಳು ದುಶ್ಚಟ ಮಾಡುತ್ತಿದ್ರೆ ದಯಮಾಡಿ ಬಿಡ್ಬೇಕು ಎಂದು ಕಿವಿಮಾತು ಹೇಳಿದರು.
ಡ್ರಗ್ಸ್ ನಿಯಂತ್ರಣಕ್ಕೆ ಸರ್ಕಾರ ಅನೇಕ ಕಾನೂನುಗಳನ್ನು ರಚಿಸಿದೆ. ಯುವಕ ಯುವತಿಯರು ತಂಬಾಕು ಉತ್ಪನ್ನಗಳನ್ನು ಸೇವಿಸುತ್ತಿದ್ದಲ್ಲಿ, ಕೂಡಲೇ ದುಶ್ಚಟಗಳನ್ನು ನಿಲ್ಲಿಸಬೇಕು. ತಂಬಾಕು ಸೇವಿಸುತ್ತಿರುವವರಲ್ಲಿ ಶೇ.50 ರಷ್ಟು ಜನ ಕ್ಯಾನ್ಸರ್ ನಂತಹ ಮಾರಕ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಯುವಜನತೆ ತಂಬಾಕು ಸೇವನೆ ಹಾಗೂ ಮಾದಕವಸ್ತುಗಳ ವ್ಯಸನಕ್ಕೆ ಒಳಗಾಗಬಾರದು ಎಂದರು.