ಬೆಂಗಳೂರು: ಮಹಿಳೆಯೊಬ್ಬರು ನೀಡಿದ್ದಂತ ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ಬಿಜೆಪಿ ಶಾಸಕ ಮುನಿರತ್ನಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಶಾಸಕ ಮುನಿರತ್ನಗೆ ಬಿಗ್ ರಿಲೀಫ್ ನೀಡಿದೆ.
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಮಹಿಳೆಯೊಬ್ಬರು ಅತ್ಯಾಚಾರ ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದಲ್ಲಿ ಅವರನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಕೋರಿ ಶಾಸಕ ಮುನಿರತ್ನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಿದ್ದರು.
ಇಂದು ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದಂತ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು, ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಮುನಿರತ್ನಗೆ ಬಿಗ್ ರಿಲೀಫ್ ನೀಡಿದೆ.