ಮಂಗಳೂರು : ತೀವ್ರ ಕುತೂಹಲ ಮೂಡಿಸಿದ ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣೆ ದಿನಾಂಕ ಇಂದು ಘೋಷಣೆಯಾಗಿದ್ದು, ನವೆಂಬರ್ 13ರಂದು ಮತದಾನ ನಡೆಯಲಿದ್ದು ನವೆಂಬರ್ 23 ರಂದು ಫಲಿತಾಂಶ ಹೊರಬೀಳಲಿದೆ. ಇನ್ನು ಈ ವಿಷಯವಾಗಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒಟ್ಟಾರೆಯಾಗಿ NDA ಅಭ್ಯರ್ಥಿ ಚನ್ನಪಟ್ಟಣ ಉಪ ಚುನಾವಣೆಯ ಅಖಾಡದಲ್ಲಿ ಇರುತ್ತಾರೆ ಎಂದು ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರು, ಚನ್ನಪಟ್ಟಣ ಉಪಚುನಾವಣೆಗೆ ಅಭ್ಯರ್ಥಿ ಕುರಿತಂತೆ ಹಲವು ಬಾರಿ ರಾಷ್ಟ್ರೀಯ ಅಧ್ಯಕ್ಷರ ಜೊತೆ ಚರ್ಚೆಯಾಗಿದೆ. ನಾವು ತಕ್ಷಣ ಅಭ್ಯರ್ಥಿಗಳನ್ನು ಆಯ್ಕೆ ಮಾಡುತ್ತೇವೆ. ಒಟ್ಟಾರೆಯಾಗಿ ಚನ್ನಪಟ್ಟಣ ಉಪಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿ ಅಖಾಡದಲ್ಲಿ ಇರುತ್ತಾರೆ ಎಂದು ತಿಳಿಸಿದರು.
ಇನ್ನು ರಾಮನಗರ ಜಿಲ್ಲೆಯ ಚನ್ನಪಟ್ಟಣ, ಬಳ್ಳಾರಿ ಜಿಲ್ಲೆಯ ಸಂಡೂರು ಹಾಗೂ ಹಾವೇರಿಯ ಶಿಗ್ಗಾವಿ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ ಚನ್ನಪಟ್ಟಣದಿಂದ ಹೆಚ್‍ಡಿ ಕುಮಾರಸ್ವಾಮಿ, ಸಂಡೂರು ಕ್ಷೇತ್ರದಿಂದ ತುಕಾರಾಂ ಹಾಗೂ ಶಿಗ್ಗಾವಿ ಕ್ಷೇತ್ರದಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸಂಸದರಾಗಿ ಆಯ್ಕೆಯಾಗಿದ್ದರು. ಈ ಹಿನ್ನೆಲೆಯಲ್ಲಿ ತೆರವಾದ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ.