ಬೆಂಗಳೂರು: ಹುಬ್ಬಳ್ಳಿಯ ಗಲಭೆ ಪ್ರಕರಣಗಳನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಹಿಂಪಡೆದಿದೆ. ರಾಜ್ಯ ಸರ್ಕಾರದ ನಿರ್ಧಾರದಿಂದ ಬಿಜೆಪಿ ಸಿಡಿದೆದ್ದಿತ್ತು. ಈ ಪ್ರಕರಣದ ಬಗ್ಗೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಧಾನಿ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಕೇಂದ್ರ ಸಚಿವರಿಗೆ ಪತ್ರವನ್ನು ಬರೆದಿದ್ದಾರೆ.
ಹೌದು ರಾಜ್ಯ ಸರ್ಕಾರವು ಹಳೇ ಹುಬ್ಬಳ್ಳಿ ಕಲಭೆ ಪ್ರಕರಣಗಳನ್ನು ಹಿಂಪಡೆದ ನಿರ್ಧಾರವನ್ನು ಪ್ರಶ್ನಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸಚಿವ ಅರ್ಜುನ್ ರಾಮ್ ಮೇಘವಾಲ್, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೆ ಪತ್ರ ಬರೆದಿದ್ದಾರೆ.
ಅವರು ಬರೆದಿರುವಂತ ಪತ್ರದಲ್ಲಿ ಹಳೇ ಹುಬ್ಬಳ್ಳಿ ಗಲಭೆ ಸಂಬಂಧ ಕೇಸ್ ಹಿಂಪಡೆದ ಬಗ್ಗೆ ರಾಜ್ಯ ಸರ್ಕಾರಕ್ಕೆ ಮರು ಪರಿಶೀಲನೆಗೆ ನಿರ್ದೇಶಿಸುವಂತೆ ಮನವಿ ಮಾಡಿದ್ದಾರೆ.
ಇದರ ನಡುವೆ ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಸರ್ಕಾರಕ್ಕೆ ಕೇಸ್ ಹಿಂಪಡೆಯುವ ಅಧಿಕಾರವಿದೆ. ಆದರೇ ಕೋರ್ಟ್ ಅವಕಾಶ ಕೊಟ್ಟರೆ ಮಾತ್ರವೇ ಕೇಸ್ ಹಿಂಪಡೆಯುತ್ತೇವೆ. ನಮ್ಮ ಸಚಿವ ಸಂಪುಟದ ನಿರ್ಧಾರವನ್ನು ನ್ಯಾಯಾಲಯಕ್ಕೆ ತಿಳಿಸುವುದಾಗಿ ಸ್ಪಷ್ಟ ಪಡಿಸಿದ್ದಾರೆ.
BIG BREAKING: ಅತ್ಯಾಚಾರ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಮಂಜೂರು