ಬೆಂಗಳೂರು : ರಾಜ್ಯದ ಮೂರು ಕ್ಷೇತ್ರಗಳಿಗೆ ಉಪಚುನಾವಣೆ ದಿನಾಂಕ ಘೋಷಣೆ ಆಗಿದ್ದು, ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯಲಿದೆ. ಬಳಿಕ ನವೆಂಬರ್ 23 ರಂದು ಫಲಿತಾಂಶ ಹೊರಬೀಳಲಿದೆ. ಈ ಹಿನ್ನೆಲೆಯಲ್ಲಿ ಚನ್ನಪಟ್ಟಣ ಉಪಚುನಾವಣೆಗೆ ನಾನೇ ಅಭ್ಯರ್ಥಿ ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಮತ್ತೆ ಸ್ಪಷ್ಟನೆ ನೀಡಿದರು.
ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ಅವರು, ಎಲ್ಲಾ ಉಪಚುನಾವಣೆಗೂ ಕಾಂಗ್ರೆಸ್ ತಯಾರಾಗಿದೆ ಈಗಾಗಲೇ ಉಪಚುನಾವಣೆಯ ಕೆಲಸವನ್ನು ಆರಂಭಿಸಿದ್ದೇವೆ. ರಾಜ್ಯದ ಮೂರು ಉಪಚುನಾವಣೆಯನ್ನು ನಾವು ಗೆಲ್ಲುತ್ತೇವೆ. ಅಲ್ಲದೆ ಚನ್ನಪಟ್ಟಣ ಉಪ ಚುನಾವಣೆಗೆ ನಾನೇ ಅಭ್ಯರ್ಥಿ ಎಂದು ತಿಳಿಸಿದರು.