ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಅವಾಂತರವೇ ಸೃಷ್ಠಿಯಾಗಿದೆ. ಮಳೆಯ ಕಾರಣದಿಂದಾಗಿ ನಾಳೆ ಬೆಂಗಳೂರಿನ ಶಾಲೆ, ಅಂಗನವಾಡಿ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಜಗದೀಶ್ ರಜೆಯನ್ನು ಘೋಷಿಸಿ ಆದೇಶಿಸಿದ್ದಾರೆ. ಇದರ ನಡುವೆ ಮಳೆ ಅವಾಂತರ ಸಂಬಂಧಿತ ದೂರುಗಳಿಗಾಗಿ ಬಿಬಿಎಂಪಿಯ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಮನವಿ ಮಾಡಿದೆ.
ಪತ್ರಿಕಾ ಪ್ರಕಟಣೆಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯು ತಿಳಿಸಿದ್ದು, ನಗರದ 8 ವಲಯ ವ್ಯಾಪ್ತಿಯಲ್ಲಿ 8 ನಿಯಂತ್ರಣ ಕೊಠಡಿಗಳಿದ್ದು, ಪಾಲಿಕೆ ಕೇಂದ್ರ ಕಛೇರಿಯಲ್ಲಿ 1 ನಿಯಂತ್ರಣ ಕೊಠಡಿಯಿದೆ. ಮಳೆಯಿಂದಾಗಿ ಏನಾದರು ಸಮಸ್ಯೆಗಳಿದ್ದರೆ ನಾಗರೀಕರು ಕೂಡಲೆ ಪಾಲಿಕೆಯ ಉಚಿತ ಸಹಾಯವಾಣಿ ಸಂಖ್ಯೆಯಾದ 1533ಗೆ ಕರೆ ಮಾಡಿ ದೂರು ನೀಡಬಹುದಾಗಿದೆ. ಸದರಿ ದೂರಗಳನ್ನು ಸಂಬಂಧಪಟ್ಟ ವಲಯ ಹಾಗೂ ಅಧಿಕಾರಿಗಳ ಗಮನಕ್ಕೆ ತಂದು ಶೀಘ್ರವಾಗಿ ಸಮಸ್ಯೆ ಬಗೆಹರಿಸುವ ಕೆಲಸ ಮಾಡಲಾಗುತ್ತದೆ ಎಂದು ತಿಳಿದೆ.
ರಾಜ್ಯದಲ್ಲಿ ಯಾರು ಬಾಂಬ್, ಬೆಂಕಿ ಹಾಕ್ತಾರೋ ದೇಶಪ್ರೇಮಿಗಳು: ಛಲವಾಧಿ ನಾರಾಯಣಸ್ವಾಮಿ ಕಿಡಿ
ರಾಯಚೂರಲ್ಲಿ ಧಾರುಣ ಘಟನೆ: ಹೊಲದ ಬದುಲಿನಲ್ಲಿದ್ದ ಕಲ್ಲುಬಂಡೆ ಉರುಳಿ ಮೂವರು ಮಕ್ಕಳು ದುರ್ಮರಣ