ಬೆಂಗಳೂರು: ನಗರದಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಹಿನ್ನಲೆಯಲ್ಲಿ ಉಪ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರು ಪಾಲಿಕೆ ಕೇಂದ್ರ ಕಛೇರಿಯ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ವೇಳೆ ಎಲ್ಲಾ ವಲಯ ಅಧಿಕಾರಿಗಳ ಜೊತೆ ವರ್ಚ್ಯುವಲ್ ಮೂಲಕ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಮಳೆ ವಿಚಾರ, ನಿಯಂತ್ರಣ ಕೊಠಡಿಯಲ್ಲಿ ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ, ಸ್ಚಚ್ಛತಾ ಡ್ರೈವ್ ಸೇರಿದಂತೆ ಇನ್ನಿತರೆ ಸಮಸ್ಯೆಗಳ ಕುರಿತು ಚರ್ಚಿಸಿದರು.
ಈ ವೇಳೆ ಬಿಡಿಎ ಅಧ್ಯಕ್ಷರಾದ ಎನ್.ಎ ಹ್ಯಾರೀಸ್, ಆಡಳಿತಗಾರರಾದ ಉಮಾಶಂಕರ್, ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್, ಬಿಡಿಎ ಆಯುಕ್ತರಾದ ಜಯರಾಮ್, ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್, ಡಾ. ಕೆ. ಹರೀಶ್ ಕುಮಾರ್, ಬಿ.ಎಂ.ಆರ್.ಡಿ.ಎ ಆಯುಕ್ತರಾದ ರಾಜೇಂದ್ರ ಚೋಳನ್, ಪ್ರಧಾನ ಅಭಿಯಂತರರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಚಿತ್ರದುರ್ಗದಲ್ಲಿ ಮನಕಲಕುವ ಘಟನೆ : ಪತ್ನಿ ಸಾವಿನಿಂದ ನೊಂದು ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ!
BREAKING : ‘ಮುಡಾ’ ಹಗರಣದ ದಾಖಲೆ ತೆಗಿಸಿದ್ದೆ ಡಿಸಿಎಂ ಡಿಕೆ ಶಿವಕುಮಾರ್ : ಜನಾರ್ಧನ್ ರೆಡ್ಡಿ ಹೊಸ ಬಾಂಬ್!