ಬೆಂಗಳೂರು: ನಗರದಲ್ಲಿ ಭಾರೀ ಮಳೆಯಿಂದಾಗಿ ಹಲವೆಡೆ ಜಲಾವೃತಗೊಂಡು, ಹಾನಿ ಉಂಟಾಗಿದೆ. ಈ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲಿಸಿ, ಮಾಹಿತಿ ಪಡೆಯಲು ಇಂದು ಡಿಸಿಎಂ ಡಿ.ಕೆ ಶಿವಕುಮಾರ್ ಸಿಡಿ ರೌಂಡ್ಸ್ ನಡೆಸಲು ನಿರ್ಧರಿಸಿದ್ದರು. ಆದರೇ ಟ್ರಾಫಿಕ್ ಜಾಮ್ ನಿಂದಾಗಿ ಅವರ ಸಿಟಿ ರೌಂಡ್ಸ್ ರದ್ದುಗೊಂಡಿದೆ.
ಬೆಂಗಳೂರಲ್ಲಿ ಭಾರೀ ಮಳೆಯಿಂದಾಗಿ ಬಹು ದೊಡ್ಡ ಅವಾಂತರವೇ ಸೃಷ್ಠಿಯಾಗಿದೆ. ಅಪಾರ್ಮೆಂಟ್ ಗಳಿಗೆ ನೀರು ನುಗ್ಗಿ, ಜನರು ಸಂಕಷ್ಟಕ್ಕೆ ಸಿಲುಕಿದ್ದರೇ, ರಸ್ತೆಗಳು ಜಲಾವೃತಗೊಂಡು ಎಲ್ಲೆಲ್ಲೂ ಕೆರೆಯಂತಾಗಿ ಮಾರ್ಪಟ್ಟಿದೆ.
ಮಾನ್ಯತಾ ಟೆಕ್ ಪಾರ್ಕ್ ರಸ್ತೆಯಂತೂ ಮಳೆಯಲ್ಲಿ ಮುಳುಗಿ ಹೋಗಿದೆ. ಕೆಲವೆಡೆ ರಸ್ತೆ ಜಲಾವೃತಗೊಂಡ ಪರಿಣಾಮ, ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿ, ಹೈರಾಣಾಗಿದ್ದಾರೆ.
ಇದೇ ಸಂದರ್ಭದಲ್ಲಿ ನಗರದ ಪರಿಸ್ಥಿತಿ ವೀಕ್ಷಣೆಗಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಬೆಂಗಳೂರು ಸಿಟಿ ರೌಂಡ್ಸ್ ನಡೆಸಲು ನಿರ್ಧರಿಸಿದ್ದರು. ಆದರೇ ಹಲವೆಡೆ ಜಲಾವೃತಗೊಂಡು ಟ್ರಾಫಿಕ್ ಜಾಮ್ ಉಂಟಾದ ಪರಿಣಾಮ, ಸಿಟಿ ರೌಂಡ್ಸ್ ಕಾರ್ಯಕ್ರಮ ರದ್ದುಗೊಳಿಸಲಾಗಿದೆ.
ಬೆಂಗಳೂರಿನ ‘BBMP ನಿಯಂತ್ರಣ ಕೊಠಡಿ’ಗೆ ಡಿಸಿಎಂ ಡಿ.ಕೆ ಶಿವಕುಮಾರ್ ಭೇಟಿ, ಪರಿಶೀಲನೆ
ಚಿತ್ರದುರ್ಗದಲ್ಲಿ ಮನಕಲಕುವ ಘಟನೆ : ಪತ್ನಿ ಸಾವಿನಿಂದ ನೊಂದು ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ!