ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಅಕ್ಟೋಬರ್ 16 ಮತ್ತು 17 ರಂದು ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆಯು ಘೋಷಿಸಿದೆ.
ಈ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 16 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗಿ/ ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಡಳಿತ ಆದೇಶಿಸಿದೆ.
ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಇಂಜಿನಿಯರಿಂಗ್, ಐಟಿಐ ಗಳಿಗೆ ರಜೆ ಇರುವುದಿಲ್ಲ ಎಂದು ಹೇಳಿದೆ.
ಇಂದು ಬೆಂಗಳೂರು ನಗರದಲ್ಲಿ ಸುರಿದಂತ ಭಾರೀ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡು ಜನರು ಹೈರಾಣಾಗಿದ್ದರು. ಎಲ್ಲೆಡೆ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದಂತ ವಾಹನ ಸವಾರರು ಪರದಾಡಿದ್ದರು. ಇದರ ನಡುವೆ ನಾಳೆ, ನಾಡಿದ್ದು ಕೂಡ ಭಾರೀ ಮಳೆಯಾಗಲಿದೆ ಎಂಬುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯು ಅಕ್ಟೋಬರ್ 16 ಮತ್ತು 17 ರಂದು ಆರೆಂಜ್ ಅಲರ್ಟ್ ಘೋಷಿಸಿದೆ.
ಈ ಮುನ್ಸೂಚನೆಯಂತೆ ಮಳೆಯ ತೀವ್ರತೆ ಹೆಚ್ಚಾಗಿರುವುದರಿಂದ ಮುಂಜಾಗೃತಾ ಕ್ರಮವಾಗಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅಕ್ಟೋಬರ್ 16 ರಂದು ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ… pic.twitter.com/q37oiHEbZV
— DIPR Karnataka (@KarnatakaVarthe) October 15, 2024
BIG NEWS: ನಾಳೆ ಬೆಂಗಳೂರಲ್ಲಿ IT, BT ಉದ್ಯೋಗಿಗಳಿಗೆ ‘ವರ್ಕ್ ಫ್ರಂ ಹೋಂ’ ನೀಡಿ: ಕಂಪನಿಗಳಿಗೆ ‘KITS’ ಸೂಚನೆ
ಚಿತ್ರದುರ್ಗದಲ್ಲಿ ಮನಕಲಕುವ ಘಟನೆ : ಪತ್ನಿ ಸಾವಿನಿಂದ ನೊಂದು ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ!