ನವದೆಹಲಿ: ರಾಹುಲ್ ಗಾಂಧಿ ಅವರು ರಾಜೀನಾಮೆ ನೀಡಿದ್ದರಿಂದ ವಯನಾಡು ಲೋಕಸಭಾ ಕ್ಷೇತ್ರ ತೆರವಾಗಿತ್ತು. ಈ ಕ್ಷೇತ್ರಕ್ಕೆಉಪ ಚುನಾವಣೆ ಘೋಷಣೆ ಮಾಡಲಾಗಿದೆ. ಈ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದಿಂದ ಪ್ರಿಯಾಂಕಾ ಗಾಂಧಿ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.
ಇಂದು ಎಐಸಿಸಿ ಜನರಲ್ ಸೆಕ್ರೇಟರಿ ಅವರು ಆದೇಶ ಹೊರಡಿಸಿದ್ದು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅನುಮೋದನೆಯ ಮೇರೆಗೆ ಈ ಕೆಳಕಂಡ ಅಭ್ಯರ್ಥಿಗಳನ್ನು ಲೋಕಸಭಾ ಚುನಾವಣೆ ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸುವುದಾಗಿ ತಿಳಿಸಿದ್ದಾರೆ.
ವಯನಾಡು ಲೋಕಸಭಾ ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರಿಗೆ ಟಿಕೆಟ್ ನೀಡಿದ್ದರೇ, ಪಾಲಕ್ಕಾಡು ವಿಧಾನಸಭಾ ಕ್ಷೇತ್ರಕ್ಕೆ ರಾಹುಲ್ ಮಮ್ಮಕೊಟ್ಟಿತಿ ಅವರಿಗೆ ಟಿಕೆಟ್ ನೀಡಲಾಗಿದೆ. ಚೇಲಕರ್ ವಿಧಾನಸಭಾ ಚುನಾವಣೆಗೆ ರಮ್ಯಾ ಹರಿದಾಸ್ ಅವರಿಗೆ ಟಿಕೆಟ್ ನೀಡಲಾಗಿದೆ.
ಬೆಂಗಳೂರು ಜನತೆ ಗಮನಕ್ಕೆ: ನಾಳೆ, ನಾಡಿದ್ದು ನಗರದಲ್ಲಿ ಭಾರೀ ಮಳೆ, ಆರೆಂಜ್ ಅಲರ್ಟ್ ಘೋಷಣೆ | Rain in Bengaluru
ಚಿತ್ರದುರ್ಗದಲ್ಲಿ ಮನಕಲಕುವ ಘಟನೆ : ಪತ್ನಿ ಸಾವಿನಿಂದ ನೊಂದು ಪತಿಯೂ ನೇಣು ಬಿಗಿದುಕೊಂಡು ಆತ್ಮಹತ್ಯೆ!