ಬೆಂಗಳೂರು : ನಟ ಧ್ರುವ ಸರ್ಜಾ ಅವರು ನಟಿಸಿರುವ ಮಾರ್ಟಿನ್ ಸಿನಿಮಾದ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಯೂಟ್ಯೂಬರ್ ಸ್ಟ್ರಾಂಗ್ ಸುಧಾಕರ್ ಕೆಟ್ಟದಾಗಿ ರಿವ್ಯೂ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಧ್ರುವ ಸರ್ಜಾ ಅಭಿಮಾನಿಗಳು ದೂರ ನೀಡಿದ್ದರು. ಹಾಗಾಗಿ ಸುಧಾಕರನನ್ನು ಮಾದನಾಯಕನಹಳ್ಳಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ ಎಂದು ಸುದ್ದಿ ಹರಿದಾಡಿತ್ತು. ಈ ಬಗ್ಗೆ ಸ್ವತಹ ಸುಧಾಕರ್ ಅವರೇ ಇದೀಗ ಸ್ಪಷ್ಟನೆ ನೀಡಿದ್ದಾರೆ.
ನಟ ಧ್ರುವ ಸರ್ಜಾ ಅವರ ನಟನೆಯ ಮಾರ್ಟಿನ್’ ಸಿನಿಮಾ ಬಗ್ಗೆ ಸುಧಾಕರ್ ಗೌಡ ಅವರು ಸಾಮಾಜಿಕ ಜಾಲತಾಣದಲ್ಲಿ ನೆಗೆಟಿವ್ ರಿವ್ಯೂ ನೀಡಿದ್ದ.ಮಾರ್ಟಿನ್’ ಸಿನಿಮಾ ಬಗ್ಗೆ ನನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ಕೆಲವರು ಪ್ರಾಣ ಬೆದರಿಕೆ ಹಾಕಿದ್ದಾರೆ ಎಂದು ವಿಡಿಯೋ ಮಾಡಿ ಹೇಳಿದ್ದರು. ಸಾಮಾಜಿಕ ಜಾಲತಾಣದಲ್ಲಿ ಸುಧಾಕರ್ ಗೌಡ ಬಂಧನ ಬಗ್ಗೆಯೂ ವದಂತಿ ಹಬ್ಬಿತ್ತು. ಆದರೆ ಇದೆಲ್ಲಾ ಸುಳ್ಳು ಎಂದು ಸುಧಾಕರ್ ಪ್ರತಿಕ್ರಿಯಿಸಿದ್ದಾರೆ.
ನನ್ನ ಬಂಧನವಾಗಿದೆ ಎನ್ನುವುದು ಸುಳ್ಳು. ಒಂದು ವೇಳೆ ನಾನು ಬಂಧನವಾಗಿದ್ದರೆ ನಿಮ್ಮ ಜೊತೆ ಮಾತನಾಡಲು ಹೇಗೆ ಸಾಧ್ಯವಾಗುತ್ತಿತ್ತು? ಎಂದು ಪ್ರಶ್ನಿಸಿದ್ದಾರೆ. ನನಗೆ ಬಂದ ಬೆದರಿಕೆ ಕರೆಗಳ ಬಗ್ಗೆ ದೂರು ನೀಡಲು ಠಾಣೆಗೆ ಹೋಗಿದ್ದೆ. ಅದನ್ನೆ ಕೆಲವರು ನೋಡಿ ನನ್ನನ್ನು ಪೊಲೀಸರು ಬಂಧಿಸಿದ್ದಾರೆ ಎನ್ನುವ ಸುದ್ದಿ ಹರಡಿದ್ದಾರೆ ಎಂದು ಸ್ಪಷ್ಟನೆ ನೀಡಿದರು.