ಬೆಂಗಳೂರು : ತಮಿಳುನಾಡು ಮೂಲದ ಯುವಕನೊಬ್ಬ ಪಿಜಿ ಕಟ್ಟಡದಿಂದ ಹಾರಿ ಸಾವನ್ನಪ್ಪಿರುವ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸದ್ಯ ಯುವಕ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತಪಡಿಸಲಾಗಿದೆ.
ಬೆಂಗಳೂರಿನಲ್ಲಿ ತಮಿಳುನಾಡು ಮೂಲದ ವಿಷ್ಣು (28) ಎಂಬ ಯುವಕ ಸಾವನ್ನಪ್ಪಿದ್ದಾನೆ ಎಂದು ತಿಳಿದು ಬಂದಿದೆ. ಪಿಜಿಯ ನಾಲ್ಕನೇ ಮಹಡಿಯಿಂದ ಜಿಗಿದು ವಿಷ್ಣು ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ ಎಂದು ಹೇಳಲಾಗುತ್ತಿದೆ.
ಸದ್ಯ ಮರಣೋತ್ತರ ಪರೀಕ್ಷೆಗಾಗಿ ಆತನ ಶವವನ್ನು ಸೆಂಟ್ ಜಾನ್ಸ್ ಆಸ್ಪತ್ರೆಗೆ ಕಳುಹಿಸಲಾಗಿದೆ. ಕೋನಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಸಾವಿನ ಕುರಿತಂತೆ ತನಿಖೆಯನ್ನು ಕೈಗೊಂಡಿದ್ದಾರೆ.