Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ತೀರ್ಮಾನ: ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್

25/05/2025 5:40 PM

BIG BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ತೀರ್ಮಾನ

25/05/2025 5:35 PM

BREAKING: ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸಕ್ಕೆ ಸಚಿವ ಹೆಚ್.ಕೆ.ಪಾಟೀಲ್ ಚಾಲನೆ

25/05/2025 5:16 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಬೆಂಗಳೂರು ಏರ್‌ಪೋರ್ಟ್’ನಲ್ಲಿ ‘ಬಿಸಿನೆಸ್ ಪಾರ್ಕ್’ ತೆರೆಯಲು ‘ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್’ ನಿರ್ಧಾರ
KARNATAKA

‘ಬೆಂಗಳೂರು ಏರ್‌ಪೋರ್ಟ್’ನಲ್ಲಿ ‘ಬಿಸಿನೆಸ್ ಪಾರ್ಕ್’ ತೆರೆಯಲು ‘ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್’ ನಿರ್ಧಾರ

By kannadanewsnow0916/10/2024 9:10 PM

ಬೆಂಗಳೂರು: ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್‌ನ (BIAL) ಅಂಗಸಂಸ್ಥೆಯಾದ ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL) ನ ಮಹತ್ವಾಕಾಂಕ್ಷಿ ಯೋಜನೆಯಾದ “ಬಿಸಿನೆಸ್‌ ಪಾರ್ಕ್‌” ತೆರೆಯಲು 2 ದಶಲಕ್ಷ ಚದರ ಅಡಿ ಪ್ರದೇಶವನ್ನು ತನ್ನದಾಗಿಸಿಕೊಳ್ಳುವ ಮೂಲಕ ಈ ಯೋಜನೆಯತ್ತ ತನ್ನ ಮೊದಲ ಹೆಜ್ಜೆಯನ್ನು ಇಟ್ಟಿದೆ.

ಜಾಗತಿಕ ಸಾಮರ್ಥ್ಯ ಕೇಂದ್ರ (ಗ್ಲೋಬಲ್ ಕೆಪ್ಯಾಸಿಟಿ ಸೆಂಟರ್,ಜಿಸಿಸಿ) ಗಳಲ್ಲೇ ಬೆಂಗಳೂರನ್ನು ಜಾಗತಿಕ ಕೇಂದ್ರವನ್ನಾಗಿಸುವ ಗುರಿಯನ್ನು ಹೊಂದಲಾಗಿದ್ದು, ಇದರ ಭಾಗವಾಗಿ ಬೃಹತ್‌ ಬಿಸಿನೆಸ್‌ ಪಾರ್ಕ್‌ ತೆರೆಯಲಾಗುತ್ತಿದೆ. ಇದರಿಂದ ಒಟ್ಟು 3.5 ಲಕ್ಷ ಉದ್ಯೋಗ ಸೃಷ್ಟಿಗೆ ಹಾಗೂ ಆರ್ಥಿಕತೆಗೆ 50 ಶತಕೋಟಿ ಡಾಲರ್‌ ಕೊಡುಗೆ ನೀಡಲಿದೆ.

ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (BLR ವಿಮಾನ ನಿಲ್ದಾಣ) ಆವರಣದ್ಲಲಿರುವ ಬೆಂಗಳೂರು ವಿಮಾನ ನಿಲ್ದಾಣ ನಗರವನ್ನು ವಿಶ್ವ ದರ್ಜೆಯ ಮಿಶ್ರ-ಬಳಕೆಯ ತಾಣವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ, ಈ ವಿಮಾನ ನಿಲ್ದಾಣ ನಗರದಲ್ಲಿ ಪ್ರಮುಖವಾಗಿ ವ್ಯಾಪಾರ, ಉದ್ಯಾನವನಗಳು, ಶಿಕ್ಷಣ ಮತ್ತು ಆರೋಗ್ಯ ಕೇಂದ್ರಗಳು, ಸಂಶೋಧನೆ ಮತ್ತು ಅಭಿವೃದ್ಧಿ (ಆರ್ & ಡಿ) ಕೇಂದ್ರಗಳು ಮತ್ತು ವಿವಿಧ ಮನರಂಜನಾ ಹಾಗೂ ಆತಿಥ್ಯ ತಾಣಗಳು ತಲೆಯೆತ್ತಲಿದೆ. ಈ ನಗರವು ಸುಸ್ಥಿರ, ಸ್ಮಾರ್ಟ್, ಆಕರ್ಷಕ ನಗರಾಭಿವೃದ್ಧಿಯಿಂದ ಅಂತಾರಾಷ್ಟ್ರೀಯ ಹೆಬ್ಬಾಗಿಲಾಗಿ ಈ ನಗರ ಕಾರ್ಯನಿರ್ವಹಿಸಲು ಸಿದ್ಧವಾಗುತ್ತಿದೆ.

ಈ ಬ್ಯುಸಿನೆಸ್ ಪಾರ್ಕ್ ಅನ್ನು 17.7 ಎಕರೆಗಳಲ್ಲಿ ನಿರ್ಮಿಸಲಾಗುತ್ತಿರುವ ಈ ಬಿಸಿನೆಸ್ ಪಾರ್ಕ್, ನಾಲ್ಕು ಬ್ಲಾಕ್‌ಗಳನ್ನು ಒಳಗೊಂಡಿದ್ದು, ಪ್ರತಿ ಬ್ಲಾಕ್‌ 0.5 ಮಿಲಿಯನ್ ಚದರ ಅಡಿ ನಗರ ಅರಣ್ಯದೊಳಗೆ ಮೂಡಿಬರಲಿದೆ. ಬಯೋಫಿಲಿಕ್ ವಿನ್ಯಾಸವು ಸೊಂಪಾದ ಉದ್ಯಾನಗಳು, ಬಾಲ್ಕನಿಗಳು ಮತ್ತು ಹಸಿರಿನಿಂದ ಕೂಡಿರುವ ಸ್ಥಳಗಳನ್ನು ಒಳಗೊಂಡಿದ್ದು, ಈ ಮೂಲಕ ವ್ಯಾಪಾರ ವಹಿವಾಟನ್ನು ಇನ್ನಷ್ಟು ಆಸಕ್ತಿದಾಯಗೊಳಿಸುವ ಉದ್ದೇಶವನ್ನು ಹೊಂದಿದೆ.

ಬಿಎಸಿಎಲ್‌ನ ಕಾರ್ಯನಿರ್ವಾಹಕ ನಿರ್ದೇಶಕ ಮತ್ತು ಸಿಇಒ ರಾವ್ ಮುನುಕುಟ್ಲ ಮಾತನಾಡಿ, “ಬೆಂಗಳೂರು ವಿಶ್ವದ ಜಿಸಿಸಿ ರಾಜಧಾನಿಯಾಗಿ ಬೆಳೆಯುತ್ತಿದೆ. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ, ವಾಹನ ಮತ್ತು ಏರೋಸ್ಪೇಸ್‌ ಕ್ಷೇತ್ರದಲ್ಲಿ ಶೇ. 36ರಷ್ಟು ಜಾಗತಿಕ ಸಾಮರ್ಥ್ಯ ಕೇಂದ್ರಗಳಿಗೆ (GCCs) ಬೆಂಗಳೂರು, ಭಾರತದ ಪ್ರಧಾನ ಕೇಂದ್ರವಾಗಿ ಹೊರಹೊಮ್ಮುತ್ತಿದೆ. ಬೆಂಗಳೂರು ಏರ್‌ಪೋರ್ಟ್ ಸಿಟಿಯಲ್ಲಿರುವ 2 ಮಿಲಿಯನ್ ಚದರ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಬಿಸಿನೆಸ್ ಪಾರ್ಕ್ ಸಾಕಷ್ಟು ನೆಟ್‌ವರ್ಕಿಂಗ್ ಅವಕಾಶಗಳು, ಸುಧಾರಿತ ಮೂಲಸೌಕರ್ಯಗಳು ಹಾಗೂ ಉನ್ನತ ದರ್ಜೆಯ ಸೌಕರ್ಯಗಳೊಂದಿಗೆ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು.

ಈ ನಮ್ಮ ಯೋಜನೆಯು ಕರ್ನಾಟಕ ರಾಜ್ಯದ ಪ್ರಸ್ತುತ ಜಿಸಿಸಿ ನೀತಿಯೊಂದಿಗೆ ಸಂಪೂರ್ಣವಾಗಿ ಹೊಂದಿಕೆಯಾಗುವ ಮೂಲಕ, ಬೆಂಗಳೂರನ್ನು ಅಂತಾರಾಷ್ಟ್ರೀಯ ವ್ಯವಹಾರಗಳಿಗೆ ಕೇಂದ್ರಬಿಂದುವಾಗಿಸಲಿದೆ. ವಿಮಾನ ನಿಲ್ದಾಣ ನಗರದ ಒಟ್ಟಾರೆ ಅಭಿವೃದ್ಧಿಯ ಶೇ.52 ರಷ್ಟು ಭಾಗವು ವ್ಯಾಪಾರ ಉದ್ಯಾನವನಗಳ (ಬಿಸಿನೆಸ್ ಪಾರ್ಕ್) ಜಾಲವನ್ನು ಹೊಂದಲಿದ್ದು, ಸಹಯೋಗ ಹಾಗೂ ನಾವಿನ್ಯತೆಗೆ ಪ್ರೋತ್ಸಾಹಕೊಡಲಿದೆ.

ಮುಂದಿನ ದಿನಗಳಲ್ಲಿ ತಲೆ ಎತ್ತಲಿರುವ ಏರ್‌ಪೋರ್ಟ್ ವೆಸ್ಟ್ ಮೆಟ್ರೋ ನಿಲ್ದಾಣವು ಈ ಬಿಸಿನೆಸ್ ನ ಅತಿ ಸಮೀಪದಲ್ಲಿದ್ದು, ಬೆಂಗಳೂರಿನ ಸಿಟಿ ಸೆಂಟರ್‌ಗೆ ಸಂಪರ್ಕವನ್ನು ಕಲ್ಪಿಸಲಿದೆ. ಇದರಿಂದ ಉದ್ಯೋಗಿಗಳು, ಸಂದರ್ಶಕರಿಗೂ ಸಹ ವೇಗ ಮತ್ತು ಪರಿಸರ ಸ್ನೇಹಿ ಪ್ರಯಾಣವನ್ನು ಒದಗಿಸಲಿದೆ. ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಧಾರಿತ ತಂತ್ರಜ್ಞಾನ ಕೇಂದ್ರವನ್ನು ರೂಪಿಸುತ್ತಿದ್ದು, ಇದರಲ್ಲಿ 3D ಮುದ್ರಣ  ಸಂಸ್ಥೆ ಮತ್ತು ಹೈಟೆಕ್ ಕೇಂದ್ರ ಪಾಕಶಾಲೆಗಳು ಸೇರಿದಂತೆ ಹಲವು ನಾವಿನ್ಯತೆಯ ಕೇಂದ್ರಬಿಂದುವಾಗಿರಲಿದೆ ಎಂದರು.

ಈ ನಗರದಲ್ಲಿ ಮನರಂಜನೆ ಮತ್ತು ಆತಿಥ್ಯ ತಾಣಗಳು ತಲೆ ಎತ್ತುತ್ತಿದ್ದು, ವಿಮಾನ ನಿಲ್ದಾಣ ಪರಿಸರ ವ್ಯವಸ್ಥೆಯಲ್ಲಿ ಭಾರತದ  ಪ್ರಪ್ರಥಮ  ಕನ್ಸರ್ಟ್ ಅರೆನಾ, ಸಮಾವೇಶ ಮತ್ತು ಪ್ರದರ್ಶನ ಕೇಂದ್ರಗಳನ್ನು ಸಹ ಈ ಯೋಜನೆ ಒಳಗೊಂಡಿದೆ. ಈಗಾಗಲೇ ಏರ್‌ಪೋರ್ಟ್‌  ಆವರಣದಲ್ಲಿರುವ ಹೋಟೆಲ್‌ ತಾಜ್ ಬೆಂಗಳೂರು ಮತ್ತು ಪ್ರಸ್ತುತ ನಿರ್ಮಾಣ ಹಂತದಲ್ಲಿರುವ 775 ಕೊಠಡಿಗಳ ಕಾಂಬೋ ಹೋಟೆಲ್ (ವಿವಾಂಟಾ & ಜಿಂಜರ್) ಸೇರಿದಂತೆ ಏರ್‌ಪೋರ್ಟ್ ಸಿಟಿಯೊಳಗೆ 5,200 ಹೋಟೆಲ್ ಕೊಠಡಿಗಳನ್ನು ಒಳಗೊಂಡು ಬೃಹತ್‌ ಆತಿಥ್ಯ ತಾಣವಾಗಿ  ಹೊರಹೊಮ್ಮಲಿದೆ.

ಏರ್‌ಪೋರ್ಟ್ ಸಿಟಿಯು ಅದ್ಭುತ ವಿನ್ಯಾಸದಿಂದ ರೂಪುಗೊಳ್ಳುತ್ತಿದ್ದು, ಇಡೀ ಆವರಣ ಶಕ್ತಿ-ತಟಸ್ಥವಾಗಿ ಕಾರ್ಯನಿರ್ವಹಿಸಿ, ನವೀಕರಿಸಬಹುದಾದ ಸಂಪನ್ಮೂಲಗಳಿಂದ ನಿರ್ಮಾಣಗೊಳ್ಳುತ್ತಿದ್ದು, ಐಜಿಬಿಸಿ ಯ ಗ್ರೀನ್ ಸಿಟೀಸ್ ಪ್ಲಾಟಿನಂ ಪ್ರಮಾಣೀಕರಣವನ್ನು ಗಳಿಸಿದೆ. ಅಷ್ಟೇ ಅಲ್ಲದೆ, ಬೃಹತ್‌ ಪ್ರಮಾಣದಲ್ಲಿ ಮಳೆನೀರು ಕೊಯ್ಲು ಅಳವಡಿಸಿಕೊಳ್ಳಲಾಗುತ್ತಿದ್ದು , ಇದರಿಂದ ವಿಮಾನ ನಿಲ್ದಾಣ ನಗರದ ನೀರಿನ ಅಗತ್ಯಗಳನ್ನು ಪೂರೈಸಲಿದೆ, ಈ ನಿಟ್ಟಿನಲ್ಲಿ ವಿಶ್ವ ಸಂಸ್ಥೆಯ  ಪರಿಸರ ಸ್ನೇಹಿ, ಸುಸ್ಥಿರ ಅಭಿವೃದ್ಧಿ ಮಾರ್ಗದರ್ಶನದ ಜವಾಬ್ದಾರಿ ನಿರ್ವಹಣೆಯ  ಧ್ಯೇಯದೊಂದಿಗೆ ಹೊಂದಿಸಲಾಗಿದೆ.

ಇನ್ನು, ಬೆಂಗಳೂರು ವಿಮಾನ ನಿಲ್ದಾಣ ನಗರವು ಅತಿ ನಿರೀಕ್ಷಿತ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರವನ್ನು ಬೃಹತ್‌ ಪ್ರಮಾಣದಲ್ಲಿ ವಿಸ್ತರಿಸುತ್ತಿದೆ, ಇದಕ್ಕಾಗಿ ಪ್ರಮುಖ ಅಂತಾರಾಷ್ಟ್ರೀಯ ಸಂಸ್ಥೆಗಳನ್ನು ಆಕರ್ಷಿಸುತ್ತಿದ್ದು, ಇದು ರಾಜ್ಯದ ಶೈಕ್ಷಣಿಕ ಮತ್ತು ಆರೋಗ್ಯ ಮೂಲಸೌಕರ್ಯವನ್ನು ಉನ್ನತೀಕರಿಸಲು ಲೈಫ್ ಸೈನ್ಸಸ್ ಪಾರ್ಕ್ ಅನ್ನು ಸ್ಥಾಪಿಸುತ್ತಿದೆ. BIAL ಅಕಾಡೆಮಿ ಮತ್ತು ಏರ್ ಇಂಡಿಯಾ ಅಕಾಡೆಮಿಯಂತಹ ಸಂಸ್ಥೆಗಳು ಮುಂದಿನ ಪೀಳಿಗೆಯ ವಾಯುಯಾನ ಮತ್ತು ಆತಿಥ್ಯ ವೃತ್ತಿಪರರಿಗೆ ತರಬೇತಿ ನೀಡಲಿವೆ.

ಬೆಂಗಳೂರು ವಿಮಾನ ನಿಲ್ದಾಣ ನಗರವು ಸುಸ್ಥಿರ, ನವೀನ ಮತ್ತು ಸಂಪರ್ಕಿತ ನಗರಾಭಿವೃದ್ಧಿಯ ದೃಷ್ಟಿಯನ್ನು ಸಾಕಾರಗೊಳಿಸುತ್ತಿದ್ದು, ಮಿಶ್ರ-ಬಳಕೆಯ ನಗರದ ಯೋಜನೆಗೆ ಜಾಗತಿಕವಾಗಿ ಮಾದರಿಯಾಗಲಿದೆ. ಈ ಪ್ರದೇಶದ ಆರ್ಥಿಕ ಬೆಳವಣಿಗೆಯ ಕೇಂದ್ರಭಾಗದಲ್ಲಿರುವ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (BLR ವಿಮಾನ ನಿಲ್ದಾಣ) ವಿಶ್ವಾದ್ಯಂತ ವೇಗವಾಗಿ ಬೆಳೆಯುತ್ತಿರುವ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ, ಕಳೆದ ವರ್ಷ 37.5 ದಶಲಕ್ಷ ರನ್ನು ನಿರ್ವಹಿಸಿದೆ. ವಿಮಾನ ನಿಲ್ದಾಣವು 2030 ರ ವೇಳೆಗೆ ತನ್ನ ಸಾಮರ್ಥ್ಯವನ್ನು 90 ದಶಲಕ್ಷ  ಪ್ರಯಾಣಿಕರಿಗೆ ವಿಸ್ತರಿಸಲು ಯೋಜಿಸಲಾಗಿದೆ. ಈ ಅಭಿವೃದ್ಧಿ ಬೆಂಗಳೂರಿನ ಪಾತ್ರವನ್ನು ಜಾಗತಿಕ ವ್ಯವಹಾರಗಳಿಗೆ ಮತ್ತು ಸುಧಾರಿತ ಉತ್ಪಾದನೆಗೆ ಪ್ರಮುಖ ಕೇಂದ್ರವಾಗಿ ಮತ್ತಷ್ಟು ಗಟ್ಟಿಗೊಳಿ ಸಲು ಅನುವುಮಾಡಿಕೊಡಲಿದೆ. ವಿಶೇಷವಾಗಿ ಏರೋಸ್ಪೇಸ್ ವಲಯದಲ್ಲಿ, ಏರ್‌ಬಸ್ ಮತ್ತು ಬೋಯಿಂಗ್‌ನಂತಹ ಉದ್ಯಮದ ದೈತ್ಯರು ನಗರದ ನುರಿತ ಉದ್ಯೋಗಿಗಳಿಂದ ಲಾಭ ಪಡೆಯಲಿದ್ದಾರೆ.

ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ ಬಗ್ಗೆ:

ಬೆಂಗಳೂರು ಏರ್‌ಪೋರ್ಟ್ ಸಿಟಿ ಲಿಮಿಟೆಡ್ (BACL), ಜನವರಿ 21, 2020 ರಂದು ಸಂಯೋಜಿತವಾಗಿದ್ದು, ಇದು ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್, BIALನ (ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ವಾಹಕ ಸಂಸ್ಥೆ) ಸಂಪೂರ್ಣ ಸ್ವಾಮ್ಯದ ಅಂಗ ಸಂಸ್ಥೆಯಾಗಿದೆ.

ವ್ಯಾಪಾರ ಉದ್ಯಾನವನಗಳು, ತಂತ್ರಜ್ಞಾನ ಕೇಂದ್ರಗಳು, ಆರೋಗ್ಯ ಜಿಲ್ಲೆ, ಸಮಾವೇಶ ಮತ್ತು ಪ್ರದರ್ಶನ ಕೇಂದ್ರ, ಜ್ಞಾನ ಉದ್ಯಾನವನ, ಹಾಸ್ಪಿಟಾಲಿಟಿ, ಸೆಂಟ್ರಲ್ ಪಾರ್ಕ್, ಒಳಗೊಂಡಿರುವ ಮಿಶ್ರ ಬಳಕೆಯ ಅಭಿವೃದ್ಧಿಯ ವಿಶ್ವ ದರ್ಜೆಯ ತಾಣವಾಗಿ BLR ವಿಮಾನ ನಿಲ್ದಾಣದಲ್ಲಿ ವಿವಿಧೋದ್ದೇಶ ಕನ್ಸರ್ಟ್ ಅರೆನಾ ಸೇರಿದಂತೆ ಏರ್‌ಪೋರ್ಟ್ ಸಿಟಿಯನ್ನು ಅಭಿವೃದ್ಧಿಪಡಿಸಲು BACL ಅನ್ನು ಸ್ಥಾಪಿಸಲಾಗಿದೆ. ಏರ್‌ಪೋರ್ಟ್ ಸಿಟಿಯನ್ನು ಸುಸ್ಥಿರ, ಸ್ಮಾರ್ಟ್, ರೋಮಾಂಚಕ ನಗರಕ್ಕೆ ಅಂತಾರಾಷ್ಟ್ರೀಯ ಹೆಬ್ಬಾಗಿಲಾಗಿ ಅಭಿವೃದ್ಧಿಪಡಿಸಲಾಗಿದೆ, ಇದು ನಾವೀನ್ಯತೆಯ ಸಂಸ್ಕೃತಿಯನ್ನು ಅನುಸರಿಸುತ್ತದೆ.

ಏರ್‌ಪೋರ್ಟ್ ಸಿಟಿಯು ಇನ್ನೋವೇಶನ್ 24×7 ಅನ್ನು ಅಳವಡಿಸಿಕೊಳ್ಳುತ್ತದೆ ಮತ್ತು ಜಾಗತಿಕ ನಗರ ಪರಿಹಾರಗಳಿಗೆ ಪರೀಕ್ಷಾ ಕೇಂದ್ರವಾಗಿದೆ. ಈ ಫ್ಯೂಚರಿಸ್ಟಿಕ್ ಏರ್‌ಪೋರ್ಟ್ ಸಿಟಿಯನ್ನು ವರ್ಕ್, ಪ್ಲೇ, ಲೀವ್, ಲರ್ನ್ ಮತ್ತು ಕ್ರಿಯೇಟ್‌ನ ಪ್ರಮುಖ ತತ್ವಗಳನ್ನು ಅನ್ವಯಿಸಿ ಅಭಿವೃದ್ಧಿಪಡಿಸಲಾಗುತ್ತಿದೆ, ಇದು ವಿಮಾನ ನಿಲ್ದಾಣ ಪ್ರವೇಶದ ವಾಣಿಜ್ಯ ಅಭಿವೃದ್ಧಿ ಮತ್ತು ಆರ್ಥಿಕ ಬೆಳವಣಿಗೆಗೆ  ಪೂರಕವಾಗಿರುತ್ತದೆ.

ವಿಮಾನ ನಿಲ್ದಾಣ ನಗರವನ್ನು ಗುಣಮಟ್ಟ ಮತ್ತು ದಕ್ಷತೆಯ ದೃಷ್ಟಿಯಿಂದ ಭಾರತದ ಪ್ರಮುಖ ಯೋಜನೆಗಳಲ್ಲಿ ಒಂದಾಗಿ ಸ್ಥಾಪಿಸಲು BACL ಬದ್ಧವಾಗಿದೆ ಮತ್ತು ಭಾರತದಲ್ಲಿ ಭವಿಷ್ಯದ ವಾಣಿಜ್ಯ ಬೆಳವಣಿಗೆಗಳಿಗೆ ಮಾನದಂಡವಾಗಲಿದೆ.

ಆಯುಷ್ಮಾನ್ ವಿಮಾ ಯೋಜನೆಗೆ ಅನುದಾನ ಒದಗಿಸಿ: ಕೇಂದ್ರ ಸಚಿವರಿಗೆ ದಿನೇಶ್ ಗುಂಡೂರಾವ್ ಮನವಿ

2026ರ ವೇಳೆಗೆ ಮಂಗನ ಕಾಯಿಲೆಗೆ ಲಸಿಕೆ ಲಭ್ಯ: ಸಚಿವ ದಿನೇಶ್ ಗುಂಡೂರಾವ್

Share. Facebook Twitter LinkedIn WhatsApp Email

Related Posts

BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ತೀರ್ಮಾನ: ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್

25/05/2025 5:40 PM1 Min Read

BIG BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ತೀರ್ಮಾನ

25/05/2025 5:35 PM1 Min Read

BREAKING: ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸಕ್ಕೆ ಸಚಿವ ಹೆಚ್.ಕೆ.ಪಾಟೀಲ್ ಚಾಲನೆ

25/05/2025 5:16 PM2 Mins Read
Recent News

BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ತೀರ್ಮಾನ: ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್

25/05/2025 5:40 PM

BIG BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ತೀರ್ಮಾನ

25/05/2025 5:35 PM

BREAKING: ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸಕ್ಕೆ ಸಚಿವ ಹೆಚ್.ಕೆ.ಪಾಟೀಲ್ ಚಾಲನೆ

25/05/2025 5:16 PM

Wtch Video: ಹಿಮಾಚಲ ಪ್ರದೇಶದ ಮೇಘ ಸ್ಫೋಟ: ಪ್ರವಾಹದಲ್ಲಿ ಕೊಚ್ಚಿ ಹೋದ 5-6 ವಾಹನಗಳು | Himachal Pradesh Cloud Burst

25/05/2025 5:11 PM
State News
KARNATAKA

BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ತೀರ್ಮಾನ: ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್

By kannadanewsnow0925/05/2025 5:40 PM KARNATAKA 1 Min Read

ಬೆಂಗಳೂರು: ವಿಧಾನಸಭೆಯಲ್ಲಿ ಅನುಚಿತ ವರ್ತನೆ ತೋರಿದ ಕಾರಣದಿಂದ ಬಿಜೆಪಿಯ 18 ಶಾಸಕರನ್ನು ಅಮಾನತುಗೊಳಿಸಲಾಗಿತ್ತು. ಈ ನಿರ್ಧಾರವನ್ನು ಹಿಂಪಡೆಯಲು ವಿಧಾನಸಭೆಯ ಸ್ಪೀಕರ್…

BIG BREAKING: 18 ಬಿಜೆಪಿ ಶಾಸಕರ ಅಮಾನತು ಹಿಂಪಡೆಯಲು ಕರ್ನಾಟಕ ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ತೀರ್ಮಾನ

25/05/2025 5:35 PM

BREAKING: ವಿಧಾನಸೌಧ ಮಾರ್ಗದರ್ಶಿ ನಡಿಗೆ ಪ್ರವಾಸಕ್ಕೆ ಸಚಿವ ಹೆಚ್.ಕೆ.ಪಾಟೀಲ್ ಚಾಲನೆ

25/05/2025 5:16 PM

ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ | Rain Alert

25/05/2025 4:49 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.