ಮಡಿಕೇರಿ : ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ಬೆಳಗ್ಗೆ 7 ಗಂಟೆ 40 ನಿಮಿಷಕ್ಕೆ ಸಲ್ಲುವ ತುಲಾ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ.
ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾ ರೆಡ್ಡಿ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಡಾ.ಮಂತರ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ಭಾಗಮಂಡಲ ಗ್ರಾ.ಪಂ. ಅಧ್ಯಕ್ಷರಾದ ಕಾಳನ ರವಿ ಇತರರು ಪಾಲ್ಗೊಳ್ಳಲಿದ್ದಾರೆ.
ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯ ಆಯುಕ್ತರಾದ ವೆಂಕಟೇಶ್ ಎಂ.ವಿ., ಕೊಡಗು ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಡೆ, ತಹಶೀಲ್ದಾರ್ ಪಿ.ಸಿ.ಪ್ರವೀಣ್ ಕುಮಾರ್, ಶ್ರೀಭಗಂಡೇಶ್ವರ-ತಲಕಾವೇರಿ ದೇವಾಲಯದ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿ ಎನ್.ಜಿ.ಚಂದ್ರಶೇಖರ್, ತಕ್ಕ ಮುಖ್ಯಸ್ಥರಾದ ಬಳ್ಳಡ್ಕ ಸಿ.ಅಪ್ಪಾಜಿ, ಕೋಡಿ.ಯು. ಮೋಟಯ್ಯ, ಸಿಬ್ಬಂದಿ ವರ್ಗದವರು ಇತರರು ಪಾಲ್ಗೊಳ್ಳಲಿದ್ದಾರೆ.