ಬೆಂಗಳೂರು : ಬೆಂಗಳೂರಿನಲ್ಲಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬೆಂಗಳೂರಿನ ದೇವಿನಗರ ಬಸ್ ನಿಲ್ದಾಣದ ಬಳಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿಯಾಗಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನನ್ನಪ್ಪಿದ್ದಾರೆ. ಬಿಇಎಲ್ ಕಡೆಯಿಂದ ಹೆಬ್ಬಾಳ ಕಡೆಗೆ ಯುವಕರು ಬರುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಬೈಕ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತಪಟ್ಟ ಬೈಕ್ ಸವಾರರ ಪೈಕಿ ಒಬ್ಬನ ಸೊಂಟದಲ್ಲಿ ಚಾಕು ಪತ್ತೆಯಾಗಿದೆ. ಚಾಕು ತೋರಿಸಿ ರಾಬರಿ ಮಾಡುತ್ತಿದ್ದ ಯುವಕರಿರಬಹುದು ಎಂದು ಪೊಲೀಸರು ಶಂಕಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಹೆಬ್ಬಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.