ಕಲಬುರಗಿ : ಕಲಬುರಗಿಯಲ್ಲಿ ತಡರಾತ್ರಿ ಭೀಕರ ಸರಣಿ ಅಪಘಾತ ಸಂಭವಿಸಿದ್ದು, ಬೈಕ್, ಕಾರು ಮತ್ತು ಲಾರಿ ನಡುವೆ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಕಲುಬರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಹಸನಾಪುರ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಬೈಕ್, ಕಾರು ಹಾಗೂ ಲಾರಿ ನಡುವೆ ಡಿಕ್ಕಿಯಾಗಿ ಬೈಕ್ ಮತ್ತು ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮೃತರನ್ನು ರಾಘವೇಂದ್ರ, ಮಜಾಹಿದ್, ಹುಸೇನ್ ಎಂದು ಗುರುತಿಸಲಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಗೊಂಡವನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಪೊಲೀಸ್ ಆಯುಕ್ತ ಡಾ. ಶರಣಬಸಪ್ಪ ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. ಕಲಬುರಗಿ ಟ್ರಾಫಿಕ್ 1 ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.