ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ಪತ್ನಿ, ಪ್ರಿಯಕರನನ್ನು ಹತ್ಯೆ ಮಾಡಿ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರಿನ ಕೋಣನಕುಂಟೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಪತ್ನಿಯ ಶೀಲ ಶಂಕಿಸಿ ಪತ್ನಿ, ಪ್ರಿಯಕರನ ಹತ್ಯೆ ಮಾಡಿ ಪತಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಟ್ಟಡದಲ್ಲಿ ಮರದ ತುಂಡಿನಿಂದ ಪತ್ನಿ ಹಾಗೂ ಪತ್ನಿಯ ಪ್ರಿಯಕರನನ್ನು ಹಲ್ಲೆ ಮಾಡಿ ಹತ್ಯೆ ಮಾಡಿದ್ದಾನೆ. ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.