ಹಾವೇರಿ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಹಾವೇರಿಯಲ್ಲಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಜೀವಂತವಾಗಿ ಪತ್ತೆಯಾಗಿದ್ದಾನೆ.
ಹಾವೇರಿಯಲ್ಲಿ ಮಳೆಯಿಂದಾಗಿ ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ರಸ್ತೆ ಕಾಣದೇ 12 ವರ್ಷದ ಬಾಲಕನೊಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದು, ಇದೀಗ ಬಾಲಕ ಜೀವಂತವಾಗಿ ಪತ್ತೆಯಾಗಿದ್ದಾನೆ.
ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗ 12 ವರ್ಷದ ನಿವೇದನ್ ಬಸವರಾಜ್ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಘಟಾನಾ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕನಿಗಾಗಿ ಶೋಧಕಾರ್ಯ ನಡೆಸಿ ರಕ್ಷಿಸಿದೆ.