ಹಾವೇರಿ : ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದ್ದು, ಹಾವೇರಿಯಲ್ಲಿ ಮಳೆಯಿಂದಾಗಿ ರಸ್ತೆಗಳು ಜಲಾವೃತಗೊಂಡಿದ್ದು, ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದ 12 ವರ್ಷದ ಬಾಲಕ ಜೀವಂತವಾಗಿ ಪತ್ತೆಯಾಗಿದ್ದ. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಹಾವೇರಿಯಲ್ಲಿ ಮಳೆಯಿಂದಾಗಿ ಚರಂಡಿ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ರಸ್ತೆ ಕಾಣದೇ 12 ವರ್ಷದ ಬಾಲಕನೊಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿ ನಾಪತ್ತೆಯಾಗಿದ್ದು, ಇದೀಗ ಬಾಲಕ ಜೀವಂತವಾಗಿ ಪತ್ತೆಯಾಗಿದ್ದ. ಬಳಿಕ ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.
ಹಾವೇರಿ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂಭಾಗ 12 ವರ್ಷದ ನಿವೇದನ್ ಬಸವರಾಜ್ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿ ಸಾವನ್ನಪ್ಪಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.