ಬೆಂಗಳೂರು: ಅನಾರೋಗ್ಯದಿಂದಾಗಿ ಸ್ಯಾಂಡಲ್ ವುಡ್ ನಿರ್ದೇಶಕ, ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ನಿರ್ದೇಶಕ ದೀಪಕ್ ಅರಸ್ ಇನ್ನಿಲ್ಲವಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದಂತ ದೀಪಕ್ ಅರಸ್(42) ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ.
ಇಂದು ಸಂಜೆ 7 ಗಂಟೆಯ ಸುಮಾರಿಗೆ ನಟಿ ಅಮೂಲ್ಯ ಅವರ ಸಹೋದರ, ಕನ್ನಡ ಚಲನ ಚಿತ್ರ ನಿರ್ದೇಶಕ ದೀಪಕ್ ಅರಸ್ ನಿಧನರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ.
ಅಂದಹಾಗೇ ದೀಪಕ್ ಅರಸ್ ಕನ್ನಡದ ಮನಸಾಲಜಿ, ಶುಗರ್ ಫ್ಯಾಕ್ಟರಿ ಸಿನಿಮಾ ನಿರ್ದೇಶಿಸುವ ಮೂಲಕ, ಸ್ಯಾಂಡಲ್ ವುಡ್ ನಲ್ಲಿ ನಿರ್ದೇಶಕರಾಗಿ ತಮ್ಮನ್ನು ಗುರುತಿಸಿಕೊಂಡಿದ್ದರು. 2011ರಲ್ಲಿ ರಾಕೇಶ್ ಅಭಿನಯದಲ್ಲಿ ಮನಸಾಲಜಿ ಚಿತ್ರ ತೆರೆ ಕಂಡಿತ್ತು. 2012ರಲ್ಲಿ ಡಾರ್ಲಿಂಗ್ ಕೃಷ್ಣ, ಸೋನಲ್ ಮೊಂಥೆರೋ ಅಭಿನಯ ಶುಗರ್ ಫ್ಯಾಕ್ಟರಿ ಚಿತ್ರವನ್ನು ನಿರ್ದೇಶಿಸಿದ್ದರು.
BIG NEWS: ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ವಿಚಾರ: ನಾಳೆ ಡಿಸಿಎಂ ಡಿಕೆಶಿ ನೇತೃತ್ವದಲ್ಲಿ ಮಹತ್ವದ ಸಭೆ
ಗಮನಿಸಿ: ಇನ್ಮುಂದೆ ತುಮಕೂರಿನ ‘ತಿಪಟೂರು ರೈಲು ನಿಲ್ದಾಣ’ದಲ್ಲಿ ‘ಜನ ಶತಾಬ್ದಿ ರೈಲು’ ನಿಲುಗಡೆ | Jan Shatabdi Train