ಬೆಂಗಳೂರು : ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ನೀಡುವ ವಿಚಾರವಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಮಹತ್ವದ ಸಭೆ ನಡೆಯಲಿದೆ ಎಂದು ತಿಳಿದುಬಂದಿದೆ.
ಇಂದು ಬೆಂಗಳೂರಿನ ಗೃಹಕಚೇರಿ ಕೃಷ್ಣದಲ್ಲಿ ಬೆಳಿಗ್ಗೆ 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ ನಡೆಸಲಿದ್ದಾರೆ. ಈ ಸಭೆಯಲ್ಲಿ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಹಾಗೂ ಪಂಚಮಸಾಲಿ ಸಮುದಾಯದ ಮುಖಂಡರು ಸೇರಿದಂತೆ ಹಲವರು ಭಾಗಿಯಾಗಲಿದ್ದಾರೆ.
ಈಗಾಗಲೇ ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ವಿಚಾರಕ್ಕೆ ಸಂಬಂಧಪಟ್ಟಂತೆ ಜಯ ಮೃತ್ಯುಂಜಯ ಸ್ವಾಮೀಜಿಗಳ ನೇತೃತ್ವದಲ್ಲಿ ಹಲವಾರು ಬಾರಿ ಪ್ರತಿಭಟನೆ ಹೋರಾಟ ನಡೆದಿದೆ. ಅಲ್ಲದೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಸಭೆ ಮಾಡಿ ಒಂದು ನಿರ್ಧಾರಕ್ಕೆ ಬರಲಿಲ್ಲವೆಂದರೆ ವಿಧಾನಸೌಧದ ಎದುರು ಪ್ರತಿಭಟನೆ ಮಾಡುವುದಾಗಿ ಎಚ್ಚರಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸಿದ್ರಾಮಯ್ಯನವರು ಇಂದು ಸಭೆ ಕರೆದಿದ್ದಾರೆ.