ರಾಮನಗರ : ತರಕಾರಿ ಮಾರಾಟ ಮಾಡುವ ವಿಚಾರವಾಗಿ ದುಷ್ಕರ್ಮಿಗಳು ವ್ಯಕ್ತಿ ಒಬ್ಬನ ತಲೆಯ ಮೇಲೆ ಕಲ್ಲು ಹತ್ತಿ ಹಾಕಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಈ ಒಂದು ದುರ್ಘಟನೆ ಸಂಭವಿಸಿದೆ.
ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರವಾಗಿ ಹತ್ಯೆಗೈಯಲಾಗಿದೆ.ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಈ ಒಂದು ಭೀಕರ ಕೊಲೆ ನಡೆದಿದೆ. ಪ್ರವೀಣ್ (33) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ.
ಕೊಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ.ತರಕಾರಿ ವ್ಯಾಪಾರ ಮಾಡುತ್ತಿದ್ದ ಮಾಗಡಿ ನಿವಾಸಿ ಪ್ರವೀಣ್ ಇದೇ ವಿಚಾರಕ್ಕೆ ಗಲಾಟೆ ನಡೆದು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗುತ್ತಿದೆ.ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.