ನವದೆಹಲಿ : ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತೆಯನ್ನು ಅಪರಹರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. ಕರ್ನಾಟಕ ಹೈ ಕೋರ್ಟ್ ನೀಡಿದಂತಹ ಆದೇಶವನ್ನು ಎತ್ತಿ ಹಿಡಿದ ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಲು ನಿರಾಕರಿಸಿದೆ.
ಹೌದು ಲೈಂಗಿಕ ದೌರ್ಜನಕ್ಕೆ ಒಳಗಾದ ಮಹಿಳೆಯನ್ನು ಕಿಡ್ಯಾಪ್ ಮಾಡಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿದ ನಿರೀಕ್ಷಣಾ ಜಾಮೀನು ಆದೇಶವನ್ನು ಪ್ರಶ್ನಿಸಿ ಎಸ್ಐಟಿ ಸುಪ್ರೀಂಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನಲ್ಲಿ ಹೈಕೋರ್ಟ್ ಆದೇಶವನ್ನು ಎತ್ತಿ ಹಿಡಿದಿದ್ದು ಜಾಮೀನು ರದ್ದು ಮಾಡಲು ನಿರಾಕರಿಸಿದೆ. ಆ ಮೂಲಕ ಭವಾನಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ.
ಎಸ್ಐಟಿ ಸಲ್ಲಿಸಿದ ಅರ್ಜಿಯ ವಿಚಾರಣೆಯನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ರಾಜಕೀಯ ಕುಟುಂಬ ಕಾರಣಕ್ಕೆ ಜಾಮೀನು ನಿರಾಕರಣೆ ಸಾಧ್ಯವಿಲ್ಲ.ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು. ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದೆಯಾ? ಅಕಸ್ಮಾತ್ ತಪ್ಪಿದ್ದರೆ ನಾವು ನಿಮ್ಮ ನೆರವಿಗೆ ಬರಬಹುದು. ಆದರೆ ಇಲ್ಲಿ ಯಾವುದು ಆ ರೀತಿ ಕಾಣುತ್ತಿಲ್ಲ ಎಂದು ಸುಪ್ರೀಂ ಕೋರ್ಟ್ ಜಾಮೀನು ರದ್ದು ಮಾಡಲು ನಿರಾಕರಿಸಿದೆ .