ಬೆಂಗಳೂರು: ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮಹಿಳೆ ಅಪಹರಣ ಪ್ರಕರಣದಲ್ಲಿ ಭವಾನಿ ರೇವಣ್ಣಗೆ ಹೈಕೋರ್ಟ್ ನಿಂದ ಜಾಮೀನು ನೀಡಲಾಗಿತ್ತು. ಈ ಜಾಮೀನು ನೀಡಿರುವುದನ್ನು ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಗೆ ಎಸ್ಐಟಿ ಅರ್ಜಿ ಸಲ್ಲಿಸಿತ್ತು. ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್, ಜಾಮೀನು ರದ್ದುಗೊಳಿಸಲು ನಕಾರ ವ್ಯಕ್ತ ಪಡಿಸಿದೆ. ಈ ಮೂಲಕ ಭವಾನಿ ರೇವಣ್ಣಗೆ ಬಿಗ್ ರಿಲೀಫ್ ನೀಡಿದೆ.
ಎಸ್ಐಟಿಯಿಂದ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸ್ ಸಂಬಂಧ ಭವಾನಿ ರೇವಣ್ಣಗೆ ನೀಡಲಾಗಿದ್ದಂತ ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಇಂದು ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು, ಈಗಾಗಲೇ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ರಾಜಕೀಯ ಕುಟುಂಬ ಅಂತ ಜಾಮೀನು ನಿರಾಕರಿಸಲು ಸಾಧ್ಯವಿಲ್ಲ. ಕೆಲ ರಾಜಕಾರಣಿಗಳು ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಹುದು ಎಂಬುದಾಗಿ ಅಭಿಪ್ರಾಯ ಪಟ್ಟಿತು. ಜಾಮೀನು ರದ್ದು ಮಾಡಲು ನಕಾರ ವ್ಯಕ್ತ ಪಡಿಸಿದೆ.
ಈ ಪ್ರಕರಣದಲ್ಲಿ ತನಿಖೆ ದಾರಿ ತಪ್ಪಿದ್ಯಾ ಎಂಬುದಾಗಿ ಎಸ್ಐಟಿ ಪರ ವಕೀಲಿರಲನ್ನು ಸುಪ್ರೀಂ ಕೋರ್ಟ್ ಪ್ರಶ್ನಿಸಿತು. ಅಲ್ಲದೇ ತಪ್ಪಿದ್ದರೇ ನಾವು ನಿಮ್ಮ ನೆರವಿಗೆ ಬರಬಹುದು. ಆದರೇ ಇಲ್ಲಿ ಯಾವುದೇ ಆ ರೀತಿ ಕಾಣುತ್ತಿಲ್ಲ ಎಂಬುದಾಗಿ ಹೇಳಿತು. ಈ ಮೂಲಕ ಹೈಕೋರ್ಟ್ ಭವಾನಿ ರೇವಣ್ಣ ಅವರಿಗೆ ಮೈಸೂರಿನ ಕೆ ಆರ್ ನಗರ ಠಾಣೆಯಲ್ಲಿ ದಾಖಲಾಗಿದ್ದಂತ ಮಹಿಳೆ ಕಿಡ್ನ್ಯಾಪ್ ಆರೋಪ ಕೇಸ್ ಪ್ರಕರಣದ ಜಾಮೀನು ರದ್ದತಿಗೆ ನಕಾರ ವ್ಯಕ್ತ ಪಡಿಸಿತು. ಹೀಗಾಗಿ ಭವಾನಿ ರೇವಣ್ಣ ಅವರಿಗೆ ಸಂತ್ರಸ್ತ ಮಹಿಳೆ ಕಿಡ್ನ್ಯಾಪ್ ಕೇಸಲ್ಲಿ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ.
Gold price today: ‘ಆಭರಣ ಪ್ರಿಯ’ರಿಗೆ ಬಿಗ್ ಶಾಕ್: ಮತ್ತೆ ‘ಚಿನ್ನದ ಬೆಲೆ’ ದಾಖಲೆಯ ಮಟ್ಟಕ್ಕೆ ಏರಿಕೆ
BREAKING : ಕಲಬುರ್ಗಿ ಜೈಲಲ್ಲಿ ಕೈದಿಗಳಿಗೆ ‘ರಾಜಾತಿಥ್ಯ’ ಆರೋಪ ಪ್ರಕರಣ : ‘CCB’ ತನಿಖೆಗೆ ವಹಿಸಿ ಕಮಿಷನರ್ ಆದೇಶ