ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಇಡಿ ಅಧಿಕಾರಿಗಳು ಮೈಸೂರಿನಲ್ಲಿರುವ ಮುಡಾ ಕಚೇರಿಯ ಮೇಲೆ ದಾಳಿ ನಡೆಸಿದೆ. ಸುಮಾರು 20 ಅಧಿಕಾರಿಗಳು ದಾಳಿ ಮಾಡಿದ್ದಾರೆ. ಅದಲ್ಲದೆ ಭೂ ಮಾಲೀಕ ಹಾಗೂ ಪ್ರಕರಣದ A4 ಆಗಿರುವಂತ ದೇವರಾಜು ಮನೆಯ ಮೇಲು ಇಡಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಹೌದು ಭೂಮಾಲಿಕ ಹಾಗೂ ಮುಡಾ ಪ್ರಕರಣದ A4 ಆರೋಪಿಯಾಗಿರುವ ದೇವರಾಜು ಮನೆಯ ಮೇಲು ಇಡಿ ರೆಡ್ ಆಗಿದೆ. ಬೆಂಗಳೂರಿನ ಕೆಂಗೇರಿ ನಿವಾಸದಲ್ಲಿ ದೇವರಾಜುಮನೆಯ ಮೇಲೆ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಸ್ನೇಹಮಯಿ ಕೃಷ್ಣ ಎನ್ನುವವರು ಸಿಎಂ ಸಿದ್ದರಾಮಯ್ಯ ರುಧ್ರ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ಮುಡಾ ಕಚೇರಿ ಮೇಲೆ 20 ಹಿಡಿ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ ಅಲ್ಲದೆ ಪ್ರಕರಣದ A4 ಆರೋಪಿ ಹಾಗೂ ಭೂ ಮಾಲೀಕರಾದಂತ ದೇವರಾಜು ಮನೆಯ ಮೇಲು ಈಡೇ ಅಧಿಕಾರಿಗಳು ದಾಳಿ ಮಾಡಿದ್ದಾರೆ.