ಬೆಂಗಳೂರು : ರಾಜ್ಯದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ಕ್ಷೇತ್ರಗಳಲ್ಲಿ ಉಪಚುನಾವಣೆಗೆ ಸಂಬಂಧಪಟ್ಟಂತೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದೆ ಆದರೆ ಕಾಂಗ್ರೆಸ್ ಮತ್ತು ಬಿಜೆಪಿ ಜೆಡಿಎಸ್ ಮೈತ್ರಿಯಲ್ಲಿ ಇನ್ನೂ ಕೂಡ ಅಭ್ಯರ್ಥಿ ಆಯ್ಕೆ ಕುರಿತಂತೆ ಗೊಂದಲ ಬಗೆಹರಿದಿಲ್ಲ.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಎಚ್.ಡಿ.ಕುಮಾರಸ್ವಾಮಿ ರಾಜೀನಾಮೆಯಿಂದ ಚನ್ನಪಟ್ಟಣ, ಬಸವರಾಜ ಬೊಮ್ಮಾಯಿ ರಾಜೀನಾಮೆಯಿಂದ ಶಿಗ್ಗಾವಿ ಮತ್ತು ಇ.ತುಕಾರಾಂ ರಾಜೀನಾಮೆಯಿಂದ ಸಂಡೂರು ವಿಧಾನಸಭಾ ಕ್ಷೇತ್ರ ತೆರವಾಗಿತ್ತು. ಈ ಹಿನ್ನೆಲೆಯಲ್ಲಿ ಉಪಚುನಾವಣೆ ನಿಗದಿ ಆಗಿದೆ.
ಶುಕ್ರವಾರ ಅಧಿಸೂಚನೆ ಪ್ರಕಟವಾಗಲಿದ್ದು, ಇದೇ ತಿಂಗಳು 25ರಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿದೆ. 28ರಂದು ನಾಮಪತ್ರಗಳ ಪರಿಶೀಲನೆ ಕಾರ್ಯ ನಡೆಯಲಿದೆ. 30ರಂದು ನಾಮಪತ್ರ ಹಿಂಪಡೆಯಲು ಕಡೆಯ ದಿನವಾಗಿದೆ. ನ.13ರಂದು ಮತದಾನ ನಡೆಯಲಿದ್ದು, ನ.23ರಂದು ಮತ ಎಣಿಕೆ ಜರುಗಲಿದೆ.








