ಬೆಂಗಳೂರು: ದೀಪವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ನೈರುತ್ಯ ರೈಲ್ವೆ ಇಲಾಖೆಯಿಂದ ಗುಡ್ ನ್ಯೂಸ್ ನೀಡಿದೆ. ಅದೇ ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲಗಳ ಸಂಚಾರದ ವ್ಯವಸ್ಥೆ ಮಾಡಿದೆ.
ಇಂದು ಪತ್ರಿಕಾ ಪ್ರಕಟಣೆಯಲ್ಲಿ ನೈರುತ್ಯ ರೈಲ್ವೆ ಇಲಾಖೆಯು ಮಾಹಿತಿ ಹಂಚಿಕೊಂಡಿದ್ದು, ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯವು ನಿರ್ಧರಿಸಿದೆ. ವಿವರಗಳು ಈ ಕೆಳಗಿನಂತಿವೆ:
ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06597/98) ರೈಲು ಸಂಚಾರ
ರೈಲು ಸಂಖ್ಯೆ 06597 ಅಕ್ಟೋಬರ್ 30, 2024 ರಂದು ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ನಿಂದ ಮಧ್ಯಾಹ್ನ 1 ಗಂಟೆಗೆ ಹೊರಡಲಿರುವ ಈ ರೈಲು ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳ ಮೂಲಕ ಮರುದಿನ ಬೆಳಗಿನ ಜಾವ 4 ಗಂಟೆಗೆ ಕಾರವಾರ ನಿಲ್ದಾಣವನ್ನು ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, ಪುನಃ ಇದೇ ರೈಲು (06598) ಅಕ್ಟೋಬರ್ 31, 2024 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಹೊರಡಲಿರುವ ರೈಲು ಅದೇ ಮಾರ್ಗವಾಗಿ, ಮರುದಿನ ಬೆಳಗಿನ ಜಾವ್ 4 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ .
ಈ ರೈಲಿನಲ್ಲಿ 4 ಜನರಲ್ ಸೆಕೆಂಡ್ ಕ್ಲಾಸ್, 10 ಸ್ಲೀಪರ್ ಕ್ಲಾಸ್, 2 ಎಸಿ ತ್ರಿ ಟೈಯರ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ / ಬ್ರೇಕ್ ವ್ಯಾನ್ಗಳು ಸೇರಿದಂತೆ 18 ಬೋಗಿಗಳು ಇರಲಿವೆ.
ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ (06565/66) ರೈಲು ಸಂಚಾರ
ರೈಲು ಸಂಖ್ಯೆ 06565 ಅಕ್ಟೋಬರ್ 30, 2024 ರಂದು ಯಶವಂತಪುರದಿಂದ ರಾತ್ರಿ 11.50ಕ್ಕೆ ಹೊರಡಲಿರುವ ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ ನಿಲ್ದಾಣಗಳ ಮೂಲಕ ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಹಿಂದಿರುಗುವ ದಿಕ್ಕಿನಲ್ಲಿ, ಪುನಃ ಇದೇ ರೈಲು (06566) ಅಕ್ಟೋಬರ್ 31, 2024 ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಂಕ್ಷನ್ ನಿಂದ ಹೊರಡಲಿರುವ ರೈಲು ಅದೇ ಮಾರ್ಗವಾಗಿ ಅದೇ ದಿನ ರಾತ್ರಿ 9:15 ಕ್ಕೆ ಯಶವಂತಪುರವನ್ನು ತಲುಪಲಿದೆ.
ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139 ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನದ ಸಮಯ ಮತ್ತು ಇತರ ವಿವರಗಳನ್ನು ಪರಿಶೀಲಿಸಬಹುದು.
BIG NEWS: ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ‘ಬಾಂಬ್ ಬೆದರಿಕೆ’ ಹಾಕಿದ್ದ ‘ಓರ್ವ ಆರೋಪಿ ಅರೆಸ್ಟ್’
Crime News: ‘ಆನ್ ಲೈನ್’ನಲ್ಲಿ ವಸ್ತು ಖರೀದಿಸುವವರೇ ಎಚ್ಚರ.! ಹೀಗೂ ವಂಚಕರು ವಂಚಿಸ್ತಾರೆ ಹುಷಾರ್.!