ಬೆಂಗಳೂರು : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಯಾಗಿದ್ದರ ಕುರಿತಾಗಿ ಗೃಹ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು ಕೋರ್ಟ್ ಆದೇಶ ನೀಡಿದರೆ ಶಾಸಕ ಯತ್ನಾಳ ಅವರನ್ನು ಬಂಧಿಸಲಾಗುತ್ತದೆ ಎಂದು ತಿಳಿಸಿದರು.
ಬೆಂಗಳೂರಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯತ್ನಾಳ್ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, “ನಾವು ಕೋರ್ಟ್ಗೆ ಕೇಳಿಕೊಂಡಿದ್ದೇವೆ. ಅದು ನಾನ್ ಬೇಲೆಬಲ್ ವಾರಂಟ್ ಆಗಿದೆ. ಕೋರ್ಟ್ ಸೂಚನೆ ಕೊಟ್ಟರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ. ಬಂಧನ ಪ್ರಕ್ರಿಯೆ ಸೇರಿ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಇನ್ನು ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ಕೊಡಿಸುವುದಾಗಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿಯವರು ವ್ಯಕ್ತಿಯೊಬ್ಬರಿಗೆ ಕೋಟ್ಯಾಂತರ ರೂಪಾಯಿ ವಂಚನೆ ಎಸೆಗಿರುವ ಆರೋಪಕ್ಕೆ ಸಂಬಂಧ ಪಟ್ಟಂತೆ ಗೃಹ ಸಚಿವ ಜಿ ಪರಮೇಶ್ವರ್ ಅವರು ಈ ಒಂದು ಕೇಸ್ ಗೆ ಸಂಬಂಧಪಟ್ಟಂತೆ ಪ್ರಹ್ಲಾದ್ ಜೋಶಿ ಸಹೋದರನಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ತಿಳಿಸಿದರು.ಈ ತರಹದ ಕೇಸ್ಗಳು ಬಂದಾಗ ಗಂಭೀರವಾಗಿಯೇ ತೆಗೆದುಕೊಳ್ಳಲಾಗುತ್ತದೆ. ಈಗಾಗಲೇ ಅವರಿಗಾಗಿ ಹುಡುಕಾಟ ನಡೆಯುತ್ತಿದೆ, ಅವರಿನ್ನೂ ಸಿಕ್ಕಿಲ್ಲ ಎಂದು ಅವರು ತಿಳಿಸಿದರು.