Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಕರ್ನಾಟಕ ಪೊಲೀಸ್ ಇಲಾಖೆ’ಯಲ್ಲಿ 8,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ !

04/03/2026 1:03 PM

ರಾಂಚಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ: ಎಂಎಸ್ ಧೋನಿಗೆ ಬಿತ್ತು ಭಾರಿ ದಂಡ!

04/03/2026 12:50 PM

ವಿಶೇಷ ವರದಿ : ಜಮೀನು ಖರೀದಿಸುವ ಮುನ್ನ ಎಚ್ಚರ : ಈ 12 ದಾಖಲೆಗಳನ್ನು ತಪ್ಪದೇ ಚೆಕ್ ಮಾಡಿಕೊಳ್ಳಿ !

04/03/2026 12:43 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರು ಮುಡಾ ಹಗರಣದ ‘CBI ತನಿಖೆ’ಗೆ ಕೊಡಲು ನೀಡುವಂತೆ ‘ಛಲವಾದಿ ನಾರಾಯಣಸ್ವಾಮಿ’ ಆಗ್ರಹ
KARNATAKA

ಮೈಸೂರು ಮುಡಾ ಹಗರಣದ ‘CBI ತನಿಖೆ’ಗೆ ಕೊಡಲು ನೀಡುವಂತೆ ‘ಛಲವಾದಿ ನಾರಾಯಣಸ್ವಾಮಿ’ ಆಗ್ರಹ

By kannadanewsnow0918/10/2024 4:42 PM

ಬೆಂಗಳೂರು: ಮೈಸೂರು ಮುಡಾ ನಿವೇಶನ ಹಂಚಿಕೆ ಹಗರಣವನ್ನು ಸಿಬಿಐಗೇ ಕೊಡಬೇಕು. ಹಾಗಿದ್ದರೆ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರತಿಪಾದಿಸಿದರು.

ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ತನಿಖೆಯನ್ನು ಸಿಬಿಐಗೆ ಕೊಡದೆ ಇದ್ದಲ್ಲಿ ಕೇಸನ್ನು ಸಂಪೂರ್ಣವಾಗಿ ಮುಚ್ಚಿ ಹಾಕುವ ವ್ಯವಸ್ಥೆ ನಡೆಯುತ್ತಿದೆ ಎಂಬ ಅನುಮಾನವಿದೆ ಎಂದು ತಿಳಿಸಿದರು.

ಕಾಂಗ್ರೆಸ್ಸಿನವÀರಿಗೆ ಮಾನವೀಯತೆ ಇದ್ದರೆ ವಾಲ್ಮೀಕಿ ಜಯಂತಿಯನ್ನು ಪಶ್ಚಾತ್ತಾಪ ದಿನ ಎಂದು ಆಚರಣೆ ಮಾಡಬೇಕಿತ್ತು ಎಂದ ಅವರು, ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು ಎಂದು ಆಗ್ರಹಿಸಿದರು. ಎಲ್ಲ ಕಡತಗಳನ್ನು ಹೆಲಿಕಾಪ್ಟರ್‍ನಲ್ಲಿ ತುಂಬಿಕೊಂಡು ಬಂದವರನ್ನೂ ತನಿಖೆಗೆ ಒಳಪಡಿಸಿ ಎಂದು ಒತ್ತಾಯಿಸಿದರು.

ಮುಖ್ಯಮಂತ್ರಿಗಳು ತಕ್ಷಣ ರಾಜೀನಾಮೆ ಕೊಡಬೇಕು; ಮಾನ್ಯ ಸುರೇಶ್ ಅವರೂ ರಾಜೀನಾಮೆ ನೀಡಬೇಕು ಎಂದು ಆಗ್ರಹವನ್ನು ಮುಂದಿಟ್ಟರು. ಇಲ್ಲವಾದರೆ ಇ.ಡಿ. ಅಧಿಕಾರಿಗಳು ಮಾನ್ಯ ಮುಖ್ಯಮಂತ್ರಿಗಳನ್ನು ಬಂಧಿಸಲಿ ಎಂದು ಮನವಿ ಮಾಡಿದರು.

ವಾಲ್ಮೀಕಿ ನಿಗಮವನ್ನು ತಿಂದು ತೇಗಿದವರು..

ಭ್ರಷ್ಟಾಚಾರ ಅಪರಾಧವಲ್ಲ ಎಂಬ ಮನಸ್ಥಿತಿಗೆ ಮುಖ್ಯಮಂತ್ರಿಗಳು ಮತ್ತು ಕಾಂಗ್ರೆಸ್ ಪಕ್ಷ ಬಂದ ಹಾಗಿದೆ. ಕುರಿಗಳನ್ನು ಕಾಯಲು ತೋಳನನ್ನು ಕಾಂಗ್ರೆಸ್ ಪಕ್ಷದ ಸರಕಾರ ನೇಮಿಸಿದಂತಿದೆ. ಇವತ್ತು ಇಷ್ಟೊಂದು ಭ್ರಷ್ಟಾಚಾರ ನಡೆಯುತ್ತಿದ್ದರೂ ಜೈಲಿನಿಂದ ಬಂದವರು ವಿಜೃಂಭಿಸಿ ಬರುತ್ತಿದ್ದಾರೆ; ನಿನ್ನೆ ತಾನೇ ವಾಲ್ಮೀಕಿ ಜಯಂತಿ ನಡೆದಿದೆ. ಸಿದ್ದರಾಮಯ್ಯನವರು ವಾಲ್ಮೀಕಿ ಜಯಂತಿ ಮಾಡುವಾಗ ನನಗೇ ನಾಚಿಕೆ ಅನಿಸಿತ್ತು. ವಾಲ್ಮೀಕಿ ನಿಗಮವನ್ನು ತಿಂದು ತೇಗಿದವರು ವಾಲ್ಮೀಕಿ ಜಯಂತಿ ಮಾಡುವುದು ಎಷ್ಟು ಸರಿ ಎಂದು ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು.

ಇಂದು ಬೆಳಿಗ್ಗೆ ಮುಡಾ ಕಚೇರಿ, ತಾಲ್ಲೂಕು ಕಚೇರಿ ಮತ್ತು ದೇವರಾಜು ಅವರ ಮನೆಗೆ ಇ.ಡಿ. ಅಧಿಕಾರಿಗಳು ರೇಡ್ ಮಾಡಿದ್ದಾರೆ. ಮೂರು ಬಾರಿ ಮುಡಾ ಕಡತಗಳನ್ನು ಕೇಳಿದ್ದರೂ ಅಧಿಕಾರಿಗಳು ತಿರಸ್ಕರಿಸಿದ್ದೇ ಇದಕ್ಕೆ ಕಾರಣ ಎಂದು ವಿವರಿಸಿದರು.

ಈ ಹಗರಣದಲ್ಲಿ ಸತ್ಯ ಹೊರಗಡೆ ಬರುವುದು ರಾಜ್ಯ ಸರಕಾರಕ್ಕೆ ಬೇಕಾಗಿಲ್ಲ. ಮುಡಾ ನಿವೇಶನಗಳನ್ನು ಅವಶ್ಯಕತೆ ಇಲ್ಲದಿದ್ದರೂ ವಾಪಸ್ ಕೊಡಲಾಗಿದೆ. ಅಧ್ಯಕ್ಷರಾಗಿದ್ದ ಮರಿಗೌಡರನ್ನು ಎತ್ತಂಗಡಿ ಮಾಡಿಸಲಾಗಿದೆ. ಅಲ್ಲಿನ ಅಧಿಕಾರಿಗಳನ್ನು ಬೇರೆ ಬೇರೆ ಇಲಾಖೆಗಳಿಗೆ ಕಳುಹಿಸಲಾಗಿದೆ. ಮುಡಾದಲ್ಲಿ ಅಪಾರವಾದ ಭ್ರಷ್ಟಾಚಾರ ನಡೆದಿದೆ ಎಂಬುದನ್ನು ಇದೆಲ್ಲವೂ ತೋರಿಸುತ್ತದೆ ಎಂದು ವಿಶ್ಲೇಷಿಸಿದರು.

ಮುಖ್ಯಮಂತ್ರಿ ಕುಟುಂಬವೇ ಪಾಲ್ಗೊಂಡ ಇಂಥ ಹಗರಣವನ್ನು ಮುಚ್ಚಿ ಹಾಕುವ ಉದ್ದೇಶ ಸರಕಾರದ್ದು. ಮೊದಲು ಎಸ್‍ಐಟಿಗೆ ತನಿಖೆಯನ್ನು ಕೊಡಲಾಗಿತ್ತು. ಕೋರ್ಟ್ ಆದೇಶವಾಗಿದ್ದರೂ ಎಸ್‍ಐಟಿ ಈ ಕೇಸನ್ನು ವಾಪಸ್ ಪಡೆದಿಲ್ಲ; ಐಎಎಸ್ ಅಧಿಕಾರಿಗಳ ತಂಡ ತನಿಖೆ ಮಾಡಲಿದೆ ಎಂದು ಹೇಳಲಾಗಿತ್ತು. ಅದನ್ನೂ ವಾಪಸ್ ತೆಗೆದುಕೊಂಡಿಲ್ಲ ಎಂದು ತಿಳಿಸಿದರು.

ಲೋಕಾಯುಕ್ತ ಕೂಡ ತನ್ನ ಕೆಲಸ ಪ್ರಾರಂಭಿಸಿತ್ತು. ಆದರೆ, ಲೋಕಾಯುಕ್ತದ ಬಗ್ಗೆ ನನಗೆ ನನ್ನದೇ ಆದ ಅನುಮಾನವಿದೆ. ಇದುವರೆಗೂ ಕೂಡ ಯಾರನ್ನೂ ಕರೆದು ತನಿಖೆಗೆ ಒಳಪಡಿಸಿಯೇ ಇಲ್ಲ; ಕೋರ್ಟ್ ಆದೇಶಗಳನ್ನು ಮೀರಿ ಲೋಕಾಯುಕ್ತ ಇದರಲ್ಲಿ ಒಳಗೊಳ್ಳುತ್ತಿದೆ ಎಂದು ಅನುಮಾನ ಕಾಡುತ್ತಿದೆ ಎಂದು ಅನಿಸಿಕೆ ವ್ಯಕ್ತಪಡಿಸಿದರು.

HDK ಹಸಿಸುಳ್ಳು ಹೇಳುತ್ತಿದ್ದಾರೆ: ಯಾರು ಪ್ರಶ್ನೆಗಳ ಮೂಲಕವೇ ಸಚಿವ ಈಶ್ವರ ಖಂಡ್ರೆ ತಿರುಗೇಟು

ಪಂಚಮಸಾಲಿ ಲಿಂಗಾಯತರ 2A ಮೀಸಲಾತಿ ವಿಚಾರ: ಈ ಮಾತು ಕೊಟ್ಟ ಡಿಸಿಎಂ ಡಿಕೆಶಿ

ಆನ್ ಲೈನ್ ಸ್ಕ್ಯಾಮ್ ವಿರುದ್ಧ ಜಾಗೃತಿ: ಕೇಂದ್ರ ಸರ್ಕಾರದೊಂದಿಗೆ ಜಂಟಿ ಉಪಕ್ರಮವನ್ನು ಪ್ರಾರಂಭಿಸಿದ ‘ಮೆಟಾ’

Share. Facebook Twitter LinkedIn WhatsApp Email

Related Posts

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಕರ್ನಾಟಕ ಪೊಲೀಸ್ ಇಲಾಖೆ’ಯಲ್ಲಿ 8,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ !

04/03/2026 1:03 PM1 Min Read

ವಿಶೇಷ ವರದಿ : ಜಮೀನು ಖರೀದಿಸುವ ಮುನ್ನ ಎಚ್ಚರ : ಈ 12 ದಾಖಲೆಗಳನ್ನು ತಪ್ಪದೇ ಚೆಕ್ ಮಾಡಿಕೊಳ್ಳಿ !

04/03/2026 12:43 PM2 Mins Read

ವಿಕಲಚೇತನ ವ್ಯಕ್ತಿಗಳಿಗೆ ಕೌಶಲ್ಯ ತರಬೇತಿ: 100 ವಿಕಲಚೇತನರಿಗೆ ಪದವಿ ಪ್ರಧಾನ

04/03/2026 12:34 PM1 Min Read
Recent News

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಕರ್ನಾಟಕ ಪೊಲೀಸ್ ಇಲಾಖೆ’ಯಲ್ಲಿ 8,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ !

04/03/2026 1:03 PM

ರಾಂಚಿಯಲ್ಲಿ ಸಂಚಾರ ನಿಯಮ ಉಲ್ಲಂಘನೆ: ಎಂಎಸ್ ಧೋನಿಗೆ ಬಿತ್ತು ಭಾರಿ ದಂಡ!

04/03/2026 12:50 PM

ವಿಶೇಷ ವರದಿ : ಜಮೀನು ಖರೀದಿಸುವ ಮುನ್ನ ಎಚ್ಚರ : ಈ 12 ದಾಖಲೆಗಳನ್ನು ತಪ್ಪದೇ ಚೆಕ್ ಮಾಡಿಕೊಳ್ಳಿ !

04/03/2026 12:43 PM

ವಿಕಲಚೇತನ ವ್ಯಕ್ತಿಗಳಿಗೆ ಕೌಶಲ್ಯ ತರಬೇತಿ: 100 ವಿಕಲಚೇತನರಿಗೆ ಪದವಿ ಪ್ರಧಾನ

04/03/2026 12:34 PM
State News
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ : `ಕರ್ನಾಟಕ ಪೊಲೀಸ್ ಇಲಾಖೆ’ಯಲ್ಲಿ 8,000ಕ್ಕೂ ಹೆಚ್ಚು ಹುದ್ದೆಗಳ ಭರ್ತಿಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ !

By kannadanewsnow5704/03/2026 1:03 PM KARNATAKA 1 Min Read

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದದ ಒಟ್ಟು 8,157 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ…

ವಿಶೇಷ ವರದಿ : ಜಮೀನು ಖರೀದಿಸುವ ಮುನ್ನ ಎಚ್ಚರ : ಈ 12 ದಾಖಲೆಗಳನ್ನು ತಪ್ಪದೇ ಚೆಕ್ ಮಾಡಿಕೊಳ್ಳಿ !

04/03/2026 12:43 PM

ವಿಕಲಚೇತನ ವ್ಯಕ್ತಿಗಳಿಗೆ ಕೌಶಲ್ಯ ತರಬೇತಿ: 100 ವಿಕಲಚೇತನರಿಗೆ ಪದವಿ ಪ್ರಧಾನ

04/03/2026 12:34 PM

ಸಿದ್ದರಾಮಯ್ಯನವರೇ, ಅಂದು ನೀಡಿದ ಭರವಸೆ ಮರೆತೀರಾ?; ಕೂಡಲೇ ಸಭೆ ಕರೆಯುವಂತೆ ಸಿಎಂಗೆ ತೀ.ನ.ಶ್ರೀನಿವಾಸ್ ಪತ್ರ

04/03/2026 12:30 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.