ಬೆಂಗಳೂರು: ಮಾರ್ಚ್-2025ರಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆ-1 ನಡೆಯಲಿದೆ. ಅಲ್ಲದೇ ಅದೇ ತಿಂಗಳಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೂ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗೆ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳುವ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯಿಂದ ಮಹತ್ವದ ಮಾಹಿತಿ ನೀಡಲಾಗಿದೆ.
ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಶಾಲಾ ಶಿಕ್ಷಣ ಇಲಾಖೆಯು, 2025ರ ಮಾರ್ಚ್/ಏಪ್ರಿಲ್ ಮಾಹೆಯಲ್ಲಿ ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆ-1ಕ್ಕೆ ರಾಜ್ಯದ ಸರ್ಕಾರಿ ಮತ್ತು ಸರ್ಕಾರದಿಂದ ಮಾನ್ಯತೆ ಪಡೆದ ಅನುದಾನಿತ, ಅನುದಾನರಹಿತ ಪ್ರೌಢ ಶಾಲಾ/ ಕಾಲೇಜುಗಳಿಂದ (ಪ್ರೌಢ ಶಾಲಾ ವಿಭಾಗ) ಹಾಜರಾಗುವ ಅರ್ಹ ಶಾಲಾ ವಿದ್ಯಾರ್ಥಿಗಳ (CCERF), ಖಾಸಗಿ ಅಭ್ಯರ್ಥಿಗಳ (CCEPF) ಮತ್ತು ಪುನರಾವರ್ತಿತ ಅಭ್ಯರ್ಥಿಗಳ (CCERR, CCEPR) ನೋಂದಣಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಾಲಾ ಮುಖ್ಯ ಶಿಕ್ಷಕರು ತಮ್ಮ ಶಾಲೆಯಿಂದ ವಿದ್ಯಾರ್ಥಿಗಳ ವಿವರಗಳನ್ನು ಮಂಡಳಿಯ https://kseab.karnataka.gov.in ಜಾಲತಾಣದ ಶಾಲಾ ಲಾಗಿನ್ ಮೂಲಕ ಅಪ್‌ಲೋಡ್ ಮಾಡುವುದು ಎಂದಿದೆ.
ಹಾಗೆಯೇ ಮಾರ್ಚ್ 2025ರ ಮಾಹೆಯಲ್ಲಿ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ಖಾಸಗಿ ಆಭ್ಯರ್ಥಿಗಳಿಗೆ, ಮನರಾವರ್ತಿತ ವಿದ್ಯಾರ್ಥಿಗಳಿಗೆ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳ ನೋಂದಣಿ ಮತ್ತು ಶುಲ್ಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರು ಮಂಡಳಿಯ https://kseab.karnataka.gov.in ಜಾಲತಾಣದ ಮೂಲಕ ಅಪ್‌ಲೋಡ್ ಮಾಡುವುದು ಎಂದು ಹೇಳಿದೆ.
ಪರೀಕ್ಷಾ ನೋಂದಾಯಿಸಲು ಮತ್ತು ಪರೀಕ್ಷಾ ಶುಲ್ಕ ಪಾವತಿಸಲು ನಿಗದಿಪಡಿಸಿದ ದಿನಾಂಕ ಹಾಗೂ ಇತರೆ ಮಾಹಿತಿಗಾಗಿ ಮಂಡಳಿಯ ಜಾಲತಾಣ https://kseab.karnataka.gov.in ರಲ್ಲಿ ಲಭ್ಯವಿರುವ 2024-25ನೇ ಸಾಲಿನ ಮಾರ್ಗಸೂಚಿ / ಸುತ್ತೋಲೆ ಡೌನ್‌ಲೋಡ್ ಮಾಡಿಕೊಳ್ಳುವುದು ಎಂದು ತಿಳಿಸಿದೆ.
ಸಹೋದರನ ಟಿಕೆಟ್ ವಂಚನೆ ಕೇಸ್: ಪ್ರಲ್ಹಾದ್ ಜೋಶಿ ರಾಜೀನಾಮೆಗೆ ಸಚಿವ ದಿನೇಶ್ ಗುಂಡೂರಾವ್ ಆಗ್ರಹ
ಬೆಂಗಳೂರು ಸಮೀಪ ಮತ್ತೊಂದು ವಿಮಾನ ನಿಲ್ದಾಣಕ್ಕೆ ಭರದ ಸಿದ್ಧತೆ: ‘DCM ಡಿಕೆಶಿ’ ನೇತೃತ್ವದಲ್ಲಿ ಅಧಿಕಾರಿಗಳ ಸಭೆ