ಬೆಂಗಳೂರು: ಇಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಲ್ಲಿ ಮತ್ತೊಂದು ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಮಹತ್ವದ ಸಭೆಯನ್ನು ಉನ್ನತ ಮಟ್ಟದ ಅಧಿಕಾರಿಗಳ ಜೊತೆಗೆ ನಡೆಸಲಾಯಿತು.
ಬೆಂಗಳೂರು ಹೊರವಲಯದಲ್ಲಿ 2ನೇ ವಿಮಾನ ನಿಲ್ದಾಣ ಪ್ರಕ್ರಿಯೆ ಚುರುಕು ಗೊಳಿಸುವ ಸಂಬಂಧ ಇಂದು ಡಿಸಿಎಂ ಡಿಸಿಎಂ ಡಿಕೆ ಶಿವಕುಮಾರ್ ಅವರ ಅಧ್ಯಕ್ಷತೆಯಲ್ಲಿ KIADB, BMRCL, BMRDA, BDA ಸಂಬಂಧಿಸಿದ ಇನ್ನಿತರೆ ಇಲಾಖೆಗಳ ಉನ್ನತ ಅಧಿಕಾರಿಗಳೊಂದಿಗೆ ಮತ್ತೊಂದು ಸುತ್ತಿನ ಚರ್ಚೆ ನಡೆಸಲಾಯಿತು.
ಈ ಯೋಜನೆಗೆ ಸಂಬಂಧಿಸಿದಂತೆ ವೈಜ್ಞಾನಿಕ ಅಧ್ಯಯನವನ್ನು ಈಗಾಗಲೇ ಕೈಗೊಳ್ಳಲಾಗಿದ್ದು, ಅದರಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ (ಎಎಐ) ಪ್ರಸ್ತಾವನೆ ಸಲ್ಲಿಸಲು ಸಿದ್ದತೆ ಮಾಡಿಕೊಳ್ಳಲಾಗುತ್ತಿದೆ.
ಬೆಂಗಳೂರಿನಲ್ಲಿ ಫಾರ್ಚೂನ್ 500 ಕಂಪೆನಿಗಳು ಸೇರಿದಂತೆ ಹಲವು ಕಂಪೆನಿಗಳು ಸ್ಥಾಪನೆಗೊಂಡಿವೆ. ಜಾಗತಿಕ ಮಟ್ಟದ ಜ್ಞಾನ, ಸಂಶೋಧನೆ ಮತ್ತು ಅಭಿವೃದ್ಧಿ ಕೇಂದ್ರಗಳು, ಶಿಕ್ಷಣ, ಆರೋಗ್ಯ ಮತ್ತು ವಿಜ್ಞಾನ ವಲಯದ ಶ್ರೇಷ್ಠ ಸಂಸ್ಥೆಗಳುಳ್ಳ ಕ್ವಿನ್ ಸಿಟಿ ಅಸ್ತಿತ್ವಕ್ಕೆ ಬರುತ್ತಿದೆ.
ಈ ಕಾರಣದಿಂದ ಈಗಿನ ವಿಮಾನ ನಿಲ್ದಾಣದ ಮೇಲಿನ ಒತ್ತಡ ದಿನದಿಂದ ದಿನಕ್ಕೆ ಹೆಚ್ಚಲಿದೆ. ಇದನ್ನು ಮುಂಚಾಲೋಚಿಸಿಯೇ ನಮ್ಮಸರಕಾರ ಮತ್ತೊಂದು ವಿಮಾನ ನಿಲ್ದಾಣದ ಅವಶ್ಯಕತೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಯೋಜನೆಗೆ ವೇಗದ ಸ್ಪರ್ಶ ನೀಡುತ್ತಿದ್ದೇವೆ ಎಂಬುದಾಗಿ ಸಚಿವ ಎಂ.ಬಿ ಪಾಟೀಲ್ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿದ್ದಾರೆ.
ಸಹೋದರನ ಟಿಕೆಟ್ ವಂಚನೆ ಕೇಸ್: ಪ್ರಲ್ಹಾದ್ ಜೋಶಿ ರಾಜೀನಾಮೆಗೆ ಸಚಿವ ದಿನೇಶ್ ಗುಂಡೂರಾವ್ ಆಗ್ರಹ
ಬಾಲ್ಯ ವಿವಾಹ ತಡೆಗಟ್ಟುವ ಕಾನೂನನ್ನು ವೈಯಕ್ತಿಕ ಕಾನೂನುಗಳಿಂದ ತಡೆಯಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್