ಬೆಂಗಳೂರು : ಗೃಹಲಕ್ಷ್ಮಿ ಹಣದಿಂದ ಮಗನ ಬಿಎಡ್ ಪರೀಕ್ಷೆಯ ಶುಲ್ಕ ಕಟ್ಟಿದ ಮಹಾತಾಯಿಯ ಬಗ್ಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದು, ತಾಯಿಗೆ ಧನ್ಯವಾದ ತಿಳಿಸಿದ್ದಾರೆ.
ಈ ಬಗ್ಗೆ ಟ್ವಿಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಬಡತನದ ಕಾರಣಕ್ಕಾಗಿ ಶಿಕ್ಷಣ ವಂಚಿತರಾಗಿರುವ ಮಕ್ಕಳನ್ನು ನನ್ನ ಬಾಲ್ಯದಿಂದಲೂ ನೋಡುತ್ತಾ ಬಂದಿದ್ದೇನೆ, ಇಂದಿಗೂ ನಮ್ಮ ನಡುವೆ ಅಂತಹಾ ಉದಾಹರಣೆಗಳು ಸಾಕಷ್ಟು ಸಿಗಲಿವೆ. ಸ್ವತಃ ನಾನೇ ನನ್ನಿಷ್ಟದ ಕಾನೂನು ವ್ಯಾಸಂಗಕ್ಕಾಗಿ ನಡೆಸಿದ ಹೋರಾಟ ಈ ಕ್ಷಣ ನೆನಪಾಗುತ್ತಿದೆ. ಅಂದು ಯಾವುದೋ ಕಾರಣಕ್ಕೆ ಶಿಕ್ಷಣ ಮೊಟಕುಗೊಳಿಸಿ, ಕೃಷಿಯಲ್ಲಿ ತೊಡಗಿಕೊಂಡಿದ್ದರೆ ಇಂದು ಮುಖ್ಯಮಂತ್ರಿಯಾಗಿ ಕೋಟ್ಯಂತರ ಕನ್ನಡಿಗರ ಸೇವೆ ಮಾಡುವ ಭಾಗ್ಯ ನನ್ನದಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಬಡತನದ ಕಾರಣಕ್ಕಾಗಿ ಶಿಕ್ಷಣ ವಂಚಿತರಾಗಿರುವ ಮಕ್ಕಳನ್ನು ನನ್ನ ಬಾಲ್ಯದಿಂದಲೂ ನೋಡುತ್ತಾ ಬಂದಿದ್ದೇನೆ, ಇಂದಿಗೂ ನಮ್ಮ ನಡುವೆ ಅಂತಹಾ ಉದಾಹರಣೆಗಳು ಸಾಕಷ್ಟು ಸಿಗಲಿವೆ. ಸ್ವತಃ ನಾನೇ ನನ್ನಿಷ್ಟದ ಕಾನೂನು ವ್ಯಾಸಂಗಕ್ಕಾಗಿ ನಡೆಸಿದ ಹೋರಾಟ ಈ ಕ್ಷಣ ನೆನಪಾಗುತ್ತಿದೆ.
ಅಂದು ಯಾವುದೋ ಕಾರಣಕ್ಕೆ ಶಿಕ್ಷಣ ಮೊಟಕುಗೊಳಿಸಿ, ಕೃಷಿಯಲ್ಲಿ ತೊಡಗಿಕೊಂಡಿದ್ದರೆ… https://t.co/cTwWQ4zDND— Siddaramaiah (@siddaramaiah) October 19, 2024
ಬಡತನದಲ್ಲೂ ಕಲಿಕೆಯೆಡೆಗಿನ ಈ ಯುವಕನ ಹಂಬಲ ಕಂಡು ನನಗೆ ಖುಷಿಯಾಯಿತು. ಗೃಹಲಕ್ಷ್ಮಿ ಯೋಜನೆ ನಿಜವಾಗಿ ತಲುಪಬೇಕಿರುವುದು ಮತ್ತು ತಲುಪುತ್ತಿರುವುದು ಇಂತಹ ಜನರನ್ನೆ. ತನಗೆ ಬಂದ ಗೃಹಲಕ್ಷ್ಮಿಯ ಹಣವನ್ನು ಕಡುಬಡತನದಲ್ಲೂ ಕೂಡಿಟ್ಟು ಮಗನ ಶಿಕ್ಷಣಕ್ಕಾಗಿ ಕೊಟ್ಟ ಆ ತಾಯಿಯ ಪ್ರೀತಿ – ಕಾಳಜಿಗೆ ಧನ್ಯವಾದ. ಬಿ.ಇಡಿ ಶಿಕ್ಷಣ ಮುಗಿಸಿ ಶಿಕ್ಷಕನಾಗಿ ನೂರಾರು ಮಕ್ಕಳ ಬದುಕು ರೂಪಿಸುವಂತಾಗು. ಇಂದು ನೀನು ಧನ್ಯವಾದ ತಿಳಿಸಿದ್ದಕ್ಕಿಂತ ಹೆಚ್ಚು ಖುಷಿ ಅಂದು ನನಗಾಗಲಿದೆ ಎಂದಿದ್ದಾರೆ.