ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಆಸ್ತಿ ನೋಂದಣಿಯಾದ 2 ದಿನಗಳಲ್ಲೇ ಇ-ಖಾತಾ, ಆಸ್ತಿಯನ್ನು ಖರೀದಿಸಿದಂತ ಮಾಲೀಕರಿಗೆ ಸಿಗಲಿದೆ.
ಈ ಬಗ್ಗೆ ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾಹಿತಿ ನೀಡಿದ್ದು, ಆಸ್ತಿ ನೋಂದಣಿಗಾಗಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಅಕ್ಟೋಬರ್‌ನಲ್ಲಿ ದಿನ ನಿಗದಿಪಡಿಸಿಕೊಂಡವರಿಗಾಗಿ ಒಂದು ಅಥವಾ ಎರಡು ದಿನದಲ್ಲಿ ಇ – ಖಾತಾ ನೀಡಲು ಬಿಬಿಎಂಪಿ ಅವಕಾಶ ಕಲ್ಪಿಸಿದೆ. ಅಗತ್ಯವಾದ ದಾಖಲೆಗಳನ್ನು ಸಲ್ಲಿಸಿದರೆ ಕೂಡಲೇ ಇ – ಖಾತಾ ಮಾಡಿಕೊಡಲು ಎಲ್ಲ ಸಹಾಯಕ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಆಸ್ತಿ ನೋಂದಣಿಗಾಗಿ ಉಪ ನೋಂದಣಾಧಿಕಾರಿ ಕಚೇರಿಯಲ್ಲಿ ಅಕ್ಟೋಬರ್‌ನಲ್ಲಿ ದಿನ ನಿಗದಿಪಡಿಸಿಕೊಂಡವರಿಗಾಗಿ ಒಂದು ಅಥವಾ ಎರಡು ದಿನದಲ್ಲಿ ಇ – ಖಾತಾ ನೀಡಲು ಬಿಬಿಎಂಪಿ ಅವಕಾಶ ಕಲ್ಪಿಸಿದೆ. ಅಗತ್ಯವಾದ ದಾಖಲೆಗಳನ್ನು ಸಲ್ಲಿಸಿದರೆ ಕೂಡಲೇ ಇ – ಖಾತಾ ಮಾಡಿಕೊಡಲು ಎಲ್ಲ ಸಹಾಯಕ ಕಂದಾಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ… pic.twitter.com/omnbVjKWDr
— DIPR Karnataka (@KarnatakaVarthe) October 19, 2024
ಬಿಬಿಎಂಪಿ ಅಂತಿಮ ಇ-ಖಾತಾವನ್ನು ಪಡೆಯುವ ವಿಧಾನಬಿಬಿಎಂಪಿ ವ್ಯಾಪ್ತಿಯಲ್ಲಿ 2024ರ ಅಕ್ಟೋಬರ್ ತಿಂಗಳ ಒಳಗೆ ಉಪ-ನೋಂದಣಾಧಿಕಾರಿ ಕಛೇರಿಯಲ್ಲಿ ನೀವು ತುರ್ತು ಆಸ್ತಿ ನೋಂದಣಿಯನ್ನು ಹೊಂದಿದ್ದೀರಾ ?
ಬಿಬಿಎಂಪಿ ಅಂತಿಮ ಇ-ಖಾತಾವನ್ನು ಪಡೆಯಲು ದಯವಿಟ್ಟು ಕೆಳಗಿನ ವಿಧಾನವನ್ನು ಅನುಸರಿಸಿ
1. ಆನ್‌ಲೈನ್ https://BBMPeAasthi.karnataka.gov.in ನಲ್ಲಿ ವಾರ್ಡ್‌ವಾರು ಇ-ಖಾತಾ ಪಟ್ಟಿಯಿಂದ ನಿಮ್ಮ ಕರಡು ಇ-ಖಾತಾ ಅನ್ನು ಡೌನ್‌ಲೋಡ್ ಮಾಡಿ.
2. ತಮ್ಮ ಸ್ವತ್ತಿನ ಆಸ್ತಿ ತೆರಿಗೆ ರಶೀದಿಯಿಂದ ನಿಮ್ಮ ವಾರ್ಡ್ ಹೆಸರು ಮತ್ತು ಸಂಖ್ಯೆಯನ್ನು ತಿಳಿದುಕೊಳ್ಳಬಹುದು.
3. ಅಂತಿಮ ಇ-ಖಾತಾ ಪಡೆಯಲು ಕೆಳಗಿನ ಮಾಹಿತಿಯನ್ನು ಆನ್‌ಲೈನ್‌ನಲ್ಲಿ ನಮೂದಿಸಿ/ಅಪ್‌ಲೋಡ್ ಮಾಡಿ:
(i) ತಮ್ಮ ಸ್ವತ್ತಿನ ಆಸ್ತಿತೆರಿಗೆ ಅರ್ಜಿ ಸಂಖ್ಯೆಯ 10-ಅಂಕಿಗಳು.
(ii) ಮಾಲೀಕರ ಆಧಾರ್ ಆಧಾರಿತ eKYC (ಇ-ಖಾತಾ ನಲ್ಲಿರುವ ಎಲ್ಲಾ ಮಾಲೀಕರು eKYC ಮಾಡಬೇಕಾಗಿದೆ – ಯಾವುದೇ ಮಾಲೀಕರು ಆಧಾರ್ ಹೊಂದಿಲ್ಲದಿದ್ದರೆ, ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಬೇಟಿ ನೀಡಿ ಪಾಸ್‌ಪೋರ್ಟ್ ಅಥವಾ ವೋಟರ್ ಐಡಿ ಅಥವಾ ಡ್ರೈವಿಂಗ್ ಲೈಸೆನ್ಸ್ ಅನ್ನು ಬಳಸಿ ದೃಢೀಕರಿಸಿ).
(iii) ಮಾಲೀಕರು ಆಸ್ತಿಯನ್ನು ಪಡೆದ ನೋಂದಾಯಿತ ಪತ್ರ ಸಂಖ್ಯೆ (ಕ್ರಯ/ದಾನ ಪತ್ರ ಇತ್ಯಾದಿ) (ಕಾವೇರಿ ತಂತ್ರಾಂಶದಿಂದ ನೋಂದಾಯಿತ ಪತ್ರ ಮಾಹಿತಿಯನ್ನು ಪಡೆಯಲಾಗುವುದು)
(iv) ಆಸ್ತಿಯ ಹಕ್ಕು ನಿರೂಪಿಸುವ ನೋಂದಾಯಿತ ಪತ್ರವು, ನೋಂದಣಿ ದಿನಾಂಕದ ಒಂದು ದಿನದ ಹಿಂದಿನಿಂದ ದಿ: 18.10.2024 ರವರೆಗೆ ಆಸ್ತಿಯ ಋಣಭಾರ ಪ್ರಮಾಣಪತ್ರ.
(v) ಆಸ್ತಿಯ ಮಾಲೀಕರು, ಆಸ್ತಿಯ ಹೊರಗೆ ಹಾಗೂ ಮುಂದೆ ನಿಂತಿರುವ ಆಸ್ತಿಯ ಛಾಯಾಚಿತ್ರ.
(vi) BESCOM 10-ಅಂಕಿಯ Acc ID (BESCOM ಬಿಲ್ ನೋಡಿ & ಖಾಲಿ ಭೂಮಿಗೆ ಕಡ್ಡಾಯವಲ್ಲ).
(vii) BWSSB (ಐಚ್ಛಿಕ).
4. ಮೇಲೆ ತಿಳಿಸಿರುವಂತೆ ಮಾಹಿತಿ ಹಾಗೂ ದಾಖಲೆಗಳು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿ, ಸಲ್ಲಿಸಿದ ನಂತರ, ಎಲ್ಲವೂ ಕ್ರಮದಲ್ಲಿದ್ದರೆ, ಒಂದೇ-ದಿನದಲ್ಲಿ ಅಂತಿಮ ಇ-ಖಾತಾ ವನ್ನು ಸಂಬಂಧಪಟ್ಟ ಸಹಾಯಕ ಕಂದಾಯ ಅಧಿಕಾರಿ ಅವರನ್ನು ಭೇಟಿ ಮಾಡತಕ್ಕದ್ದು.
5. ಮೇಲಿನ ವಿಧಾನವನ್ನು ಪೂರ್ಣಗೊಳಿಸಲು ಯಾವುದೇ ಸವಾಲುಗಳಿದ್ದಲ್ಲಿ ಮತ್ತು ನೀವು ತುರ್ತು ನೋಂದಣಿಯನ್ನು ಹೊಂದಿದ್ದರೆ, ನೀವು ತಮ್ಮ ಎಲ್ಲಾ ದಾಖಲೆಗಳು ಮತ್ತು ತಹಲ್‌ವರೆಗಿನ ಋಣಭಾರ ಪ್ರಮಾಣಪತ್ರವನ್ನು ಸಂಬಂಧಪಟ್ಟ ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಭೇಟಿ ನೀಡಿ, ಅಲ್ಲಿ ಸಹಾಯ ಫಲಕದ ಸಿಬ್ಬಂಧಿಯು ತಮಗೆ ಮಾಹಿತಿಯನ್ನು ಅಪ್‌ಲೋಡ್ ಮಾಡಲು ಮತ್ತು ಒಂದು ದಿನದಲ್ಲಿ ನಿಯಮಗಳ ಪ್ರಕಾರ ನಿಮಗೆ ಅಂತಿಮ ಇ-ಖಾತಾಯನ್ನು ಹೊಂದಲು ಸಹಾಯವನ್ನು ಪಡೆಯಬಹುದು.
6. ಸೂಚನೆ: ಉಪ-ನೋಂದಣಾಧಿಕಾರಿ ಕಛೇರಿಯಲ್ಲಿ ತುರ್ತು ಆಸ್ತಿ ನೋಂದಣಿಯನ್ನು ಹೊಂದಿರದ ನಾಗರಿಕರು, ಬಿಬಿಎಂಪಿ ಹಿಂಬರಹದ ಮೂಲಕ ನಿರ್ದಿಷ್ಟವಾಗಿ ಸೂಚಿನೆಯ ಹೊರತು ಅಂತಿಮ ಇ-ಖಾತಾವನ್ನು ಪಡೆಯಲು ಸಹಾಯಕ ಕಂದಾಯ ಅಧಿಕಾರಿ ಕಚೇರಿಗೆ ಹೋಗದಂತೆ ವಿನಂತಿಸಲಾಗಿದೆ. ಅಂತಹ ಪ್ರಕರಣಗಳಲ್ಲಿ ತಮ್ಮ ಅಗತ್ಯಕ್ಕೆ ಅನುಕೂಲದ ಸಮಯದಲ್ಲಿ ತಮ್ಮ ಅಂತಿಮ ಇ-ಖಾತಾವನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಬಹುದು ಎಂಬುದನ್ನು ದಯವಿಟ್ಟು ಗಮನಿಸಿ. ಅಂತಹ ಸಂದರ್ಭಗಳಲ್ಲಿ ಋಣಭಾರ ಪ್ರಮಾಣಪತ್ರ (EC) ಅಗತ್ಯವನ್ನು ಕೈಬಿಡಲಾಗಿದೆ.
7. ಯಾವುದೇ ಪ್ರಶ್ನೆಗಳು ಅಥವಾ ಸಮಸ್ಯೆಗಳಿಗಾಗಿ 1533 ಗೆ ಕರೆ ಮಾಡಿ ಅಥವಾ BBMPeKhata@gmail.com ಗೆ ಇಮೇಲ್ ಮಾಡಿ.
ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅನುಮೋದನೆ
ಅ.23ರಂದು ವಯನಾಡು ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಪ್ರಿಯಾಂಕಾ ಗಾಂಧಿ ನಾಮಪತ್ರ ಸಲ್ಲಿಕೆ
ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನಿರ್ಣಯಕ್ಕೆ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅನುಮೋದನೆ