ರಾಯಚೂರು : ಕಾಲೇಜು ಫೀಸ್ ಕಟ್ಟಲು ವಿಳಂಬವಾಗಿದಕ್ಕೆ ಆಡಳಿತ ಮಂಡಳಿಯ ಅಧಿಕಾರಿಗಳು ವಿದ್ಯಾರ್ಥಿನಿಗೆ ಕಿರುಕುಳ ನೀಡಿದ್ದಾರೆ ಇದರಿಂದ ಬೇಸತ್ತ ವಿದ್ಯಾರ್ಥಿನಿಯು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ನಡೆದಿದೆ.
ಹೌದು ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿರುವ ಮೆಡಿಕಲ್ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ. ಫೀಸ್ ಕಟ್ಟಲು ವಿಳಂಬವಾಗಿದ್ದಕ್ಕೆ ಬಡ್ಡಿ ಕಟ್ಟಲು ಕಿರುಕುಳ ನೀಡಿದ ಆರೋಪ ಕೇಳಿಬಂದಿದ್ದು, ಆಡಳಿತಾಧಿಕಾರಿ ಉಮಾಶಂಕರ್ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಮಾನ್ವಿಯ KPSVS ಆಯುರ್ವೇದಿಕ್ ಮೆಡಿಕಲ್ ಕಾಲೇಜಿನಲ್ಲಿ ಈ ಒಂದು ಘಟನೆ ನಡೆದಿದೆ.ಫೀಸ್ ಕಟ್ಟಲು ವಿಳಂಬವಾದರೆ ಬಡ್ಡಿ ಕಟ್ಟುವಂತೆ ಆಡಳಿತಾಧಿಕಾರಿ ಉಮಾಶಂಕರ್ ವಿರುದ್ಧ ಆರೋಪ ಕೇಳಿ ಬಂದಿದೆ. ಬಯೋಮೆಟ್ರಿಕ್ ನೀಡದೆ ಕಿರುಕುಳ ನೀಡುತ್ತಿರುವ ಆರೋಪ ಕೇಳಿ ಬಂದಿದೆ. ಅಲ್ಲದೆ ಕೆಟ್ಟದಾಗಿ ನಿಂದಿಸಿ ವಿದ್ಯಾರ್ಥಿನಿಯರಿಗೆ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ. ಆಡಳಿತಾಧಿಕಾರಿ ಉಮಾಶಂಕರ ವಿರುದ್ಧ ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.
ಈ ಒಂದು ವಿಚಾರ ತಿಳಿದು ವಿದ್ಯಾರ್ಥಿನಿಯರ ಪೋಷಕರು ಕಾಲೇಜಿಗೆ ಬಂದಿದ್ದಾರೆ. ಆಂಧ್ರ ಮಹಾರಾಷ್ಟ್ರ ಹಾಗೂ ರಾಜ್ಯದ ವಿವಿಧಡೆಯಿಂದ ಪೋಷಕರು ಆಗಮಿಸಿದ್ದಾರೆ. ಬಡ್ಡಿ ಹಣ ಹಿಂತಿರುಗಿಸುವಂತೆ ವಿದ್ಯಾರ್ಥಿನಿಯರು ಹಾಗೂ ಪೋಷಕರು ಪಟ್ಟು ಹಿಡಿದಿದ್ದಾರೆ. ಈ ವೇಳೆ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರ ಪೋಷಕರ ನಡುವೆ ವಾಗ್ವಾದ ನಡೆದಿದೆ. ಸ್ಥಳಕ್ಕೆ ಡಿವೈಎಸ್ಪಿ ಮಾನ್ವಿ ಪಟ್ಟಣ ಠಾಣೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.