ಕಲಬುರ್ಗಿ : ಭೋವಿ ನಿಗಮದಲ್ಲಿ ಹಗರಣಕ್ಕೆ ಸಂಬಂಧಿಸಿದಂತೆ ಇಂದು ನಗರದ ತಮ್ಮ ನಿವಾಸದ ಮೇಲೆ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ ಬಗ್ಗೆ ಮಾತನಾಡಿದ MLC ಸುನೀಲ್ ವಲ್ಯಾಪುರೆ ಅವರು, ಈ ಪ್ರಕರಣದಲ್ಲಿ ನಮ್ಮದೇನೂ ಪಾತ್ರ ಇಲ್ಲ ಎಂದು ತಿಳಿಸಿದರು.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ಪ್ರಕರಣದಲ್ಲಿ ನಮ್ಮದೇನೂ ಪಾತ್ರ ಇಲ್ಲ. ನಮ್ಮ ಮನೆಯಲ್ಲಿ ಏನಾದ್ರು ಸಿಗಬಹುದು ಅಂತ ನನ್ನ ಮನೆಯಲ್ಲಿ ಸರ್ಚ್ ಮಾಡ್ತಿದ್ದಾರೆ. ಇಲ್ಲೇನ್ ಬದನೇಕಾಯಿಯೂ ಸಿಗಲ್ಲ. ಸಿಐಡಿ ಅಧಿಕಾರಿಗಳು ಸರ್ಚ್ ಮಾಡ್ತಿದ್ದಾರೆ ನಾನು ಅವರಿಗೆ ಸಹಕಾರ ನೀಡುತ್ತೇನೆ. ಅಧಿಕಾರಿಗಳು ಅವರ ಕೆಲಸ ಮಾಡ್ತಿದ್ದಾರೆ ಎಂದು ತಿಳಿಸಿದರು.
ಭೋವಿ ನಿಗಮದಲ್ಲಿ ಅವ್ಯವಹಾರ ಆಗಿದೆ ಅಂತ ನಾನೇ ಧ್ವನಿ ಎತ್ತಿದ್ದೆ. ಕಳೆದ ವಿಧಾನ ಪರಿಷತ್ ಅಧಿವೇಶನದಲ್ಲಿ ಭೋವಿ ನಿಗಮದಲ್ಲಿ ಅವ್ಯವಹಾರ ಆಗಿದೆ ಅಂತ ಪ್ರಸ್ತಾವನೆ ಸಲ್ಲಿಸಿ ಮಾತನಾಡಿದ್ದೆ. ಈ ಹಗರಣದಲ್ಲಿ ಕೆಲವು ಅಧಿಕಾರಿಗಳು ಸಿಕ್ಕಿಬಿದ್ದಿದ್ದಾರೆ. ಅವರೇ ನನ್ನ ಮೇಲೆ ಗೂಬೆ ಕುರಿಸಲು ಈ ರೀತಿ ಮಾಡ್ತಿದ್ದಾರೆ ಎಂದು ಆರೋಪಿಸಿದರು.