Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಆರ್‌ ಜಿ ಕರ್ ಪ್ರಕರಣಕ್ಕೆ ಕಲ್ಕತ್ತಾ ಹೈಕೋರ್ಟ್ ಬಿಗ್ ಟ್ವಿಸ್ಟ್!: ಹೊಸ CBI ತಂಡ ರಚನೆಗೆ ಆದೇಶ : ಜೂನ್ 25 ರೊಳಗೆ ವರದಿ ಸಲ್ಲಿಸಲು ಗಡುವು!

BREAKING: ‘ಸೌಂದರ್ಯ ಕ್ಲಿನಿಕ್‌’ಗಳಲ್ಲಿ ಇಂಜೆಕ್ಷನ್ ರೂಪದ ಕಾಸ್ಮೆಟಿಕ್ಸ್ ಬಳಸುವಂತಿಲ್ಲ: ಕೇಂದ್ರ ಸರ್ಕಾರದ ಮಹತ್ವದ ಆದೇಶ

ಇಟಲಿ ಪ್ರಧಾನಿ ಮೆಲೋನಿಗೆ ಮೋದಿ ಉಡುಗೊರೆ! — ಅಸ್ಸಾಂನ ಚಿನ್ನದ ರೇಷ್ಮೆ ಮತ್ತು ಶಾಸ್ತ್ರೀಯ ಸಂಗೀತದ ಜುಗಲ್‌ಬಂದಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ‘ಹಸಿರು ಪಟಾಕಿ’ಯನ್ನು ಮಾತ್ರ ‘ರಾತ್ರಿ 8 ರಿಂದ 10 ಗಂಟೆ’ವರೆಗೆ ಸಿಡಿಸಲು ಅವಕಾಶ: ಸಚಿವ ಈಶ್ವರ್ ಖಂಡ್ರೆ
KARNATAKA

BIG NEWS: ‘ಹಸಿರು ಪಟಾಕಿ’ಯನ್ನು ಮಾತ್ರ ‘ರಾತ್ರಿ 8 ರಿಂದ 10 ಗಂಟೆ’ವರೆಗೆ ಸಿಡಿಸಲು ಅವಕಾಶ: ಸಚಿವ ಈಶ್ವರ್ ಖಂಡ್ರೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ ಮತ್ತು ಸುಪ್ರೀಂಕೋರ್ಟ್ ತನ್ನ ಹಲು ತೀರ್ಪುಗಳಲ್ಲಿ 125 ಡೆಸಿಬಲ್ ಗಿಂತ ಹೆಚ್ಚು ಶಬ್ದ ಮಾಡುವ ಮತ್ತು ಹೆಚ್ಚು ಹೊಗೆ ಹೊರಹೊಮ್ಮುವ ರಾಸಾಯನಿಕಯುಕ್ತ ಪಟಾಕಿಗಳನ್ನು ನಿಷೇಧಿಸಿದೆ. ರಾತ್ರಿ 8 ರಿಂದ 10ಗಂಟೆ ವರೆಗೆ ಮಾತ್ರ ಹಸಿರು ಪಟಾಕಿಗಳನ್ನು ಹಚ್ಚಲು ಅವಕಾಶ ಕಲ್ಪಿಸಿದೆ. ಸಾರ್ವಜನಿಕರು ಈ ನಿಯಮಗಳನ್ನು ಪಾಲಿಸಬೇಕು ಎಂದು ಈಶ್ವರ ಖಂಡ್ರೆ ತಿಳಿಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕತ್ತಲೆಂಬ ಅಜ್ಞಾನವನ್ನು ಕಳೆದು ಸುಜ್ಞಾನವೆಂಬ ದೀಪ ಹಚ್ಚುವ ಬೆಳಕಿನ ಹಬ್ಬಕ್ಕೂ ಪಟಾಕಿಗೂ ಅವಿನಾಭಾವ ಬಾಂಧವ್ಯ ಬೆಸೆದಿದೆ. ಆದರೆ ಈ ಪಟಾಕಿಗಳು ಪರಿಸರಕ್ಕೆ ತೀವ್ರ ಹಾನಿ ಉಂಟು ಮಾಡುತ್ತವೆ ಈ ನಿಟ್ಟಿನಲ್ಲಿ ಪ್ರಜ್ಞಾವಂತ ನಾಗರಿಕರು ಪರಿಸರಕ್ಕೆ ದಟ್ಟ ಹೊಗೆ ಸೇರಿಸುವ, ರಾಸಾಯನಿಕ, ಭಾರ ಲೋಹಯುಕ್ತ ಪಟಾಕಿ ಬಳಸದಂತೆ ಮನವಿ ಮಾಡಿದ್ದಾರೆ.

ಹಸಿರು ಪಟಾಕಿ ಮಾತ್ರವೇ ಬಳಸಿ:

ಹಲವು ಮಕ್ಕಳು ಪಟಾಕಿ ಸಿಡಿಸುವಾಗ ಕಣ್ಣಿಗೆ ಪೆಟ್ಟು ಮಾಡಿಕೊಂಡಿದ್ದನ್ನು ನೋಡುತ್ತೇವೆ, ಹಲವರು ಗಾಯಗೊಳ್ಳುತ್ತಾರೆ. ಹೀಗಾಗಿ ಸಾಧ್ಯವಾದಷ್ಟು ಪಟಾಕಿ ಹಚ್ಚದಿರುವುದೇ ಉತ್ತಮ. ಪಟಾಕಿ ಸಿಡಿಸಲೇಬೇಕು ಎಂದಾದರೆ ಪರಿಸರಕ್ಕೆ ಹಾನಿ ಉಂಟು ಮಾಡದ ಹಸಿರು ಪಟಾಕಿ ಮಾತ್ರವೇ ಸಿಡಿಸಿ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಮುಚ್ಚಳಿಕೆ ಬರೆಸಿಕೊಳ್ಳಲು ಸೂಚನೆ:

ಗಣಪತಿ ಹಬ್ಬದ ಸಂದರ್ಭದಲ್ಲಿ ಮುಖ್ಯ ಕಾರ್ಯದರ್ಶಿಗಳೊಂದಿಗೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಪಟಾಕಿ ಮಳಿಗೆಗೆ ಅನುಮತಿ ನೀಡುವಾಗ ಹಸಿರು ಪಟಾಕಿ ಮಾತ್ರ ದಾಸ್ತಾನು, ಸಾಗಾಟ ಹಾಗೂ ಮಾರಾಟ ಮಾಡುವುದಾಗಿ ಮಳಿಗೆ ಮಾಲೀಕರಿಂದ ಮುಚ್ಚಳಿಕೆ ಬರೆಸಿಕೊಳ್ಳಲು ಸೂಚಿಸಲಾಗಿದೆ. ನಿಯಮ ಉಲ್ಲಂಘಿಸುವವರಿಗೆ ಮುಂದಿನ ಸಾಲಿನಿಂದ ಪಟಾಕಿ ಮಳಿಗೆ ಅನುಮತಿ ನೀಡದಂತೆ ತಿಳಿಸಲಾಗಿದೆ. ಜಿಲ್ಲಾಡಳಿತ ಈ ಬಗ್ಗೆ ಕ್ರಮ ವಹಿಸಬೇಕು ಎಂದು ತಿಳಿಸಿದ್ದಾರೆ.

ಜಾಗೃತಿ ಮೂಡಿಸಲು ಮನವಿ:

ಸಂಘ ಸಂಸ್ಥೆಗಳು, ಶಿಕ್ಷಕರು, ಬೋಧಕರು, ಉಪನ್ಯಾಸಕರು, ಪರಿಸರ ಪ್ರೇಮಿಗಳು, ಜನಪ್ರತಿನಿಧಿಗಳು ಜನರಲ್ಲಿ ಅದರಲ್ಲೂ ಮಕ್ಕಳಲ್ಲಿ ಪಟಾಕಿಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸಿ ಪಟಾಕಿ ತ್ಯಜಿಸುವಂತೆ ಇಲ್ಲವೇ ಹಸಿರು ಪಟಾಕಿ ಮಾತ್ರ ಬಳಸಲು ಮನವಿ ಮಾಡಬೇಕು ಎಂದೂ ಪರಿಸರ ಸಚಿವರು ಮನವಿ ಮಾಡಿದ್ದಾರೆ.
ಹೆಚ್ಚು ಶಬ್ದ ಮತ್ತು ದಟ್ಟ ಹೊಗೆ ಹೊರಹೊಮ್ಮುವ ರಾಸಾಯನಿಕ ಮತ್ತು ಭಾರ ಲೋಹಯುಕ್ತ ಪಟಾಕಿಗಳಿಂದ ಉಸಿರಾಟಕ್ಕೂ ತೊಂದರೆ ಆಗುತ್ತದೆ. ಭಾರೀ ಶಬ್ದ ಮಾಡುವ ಪಟಾಕಿಗಳಿಂದ ಪಶು, ಪಕ್ಷಿಗಳಿಗೂ ಕಿರಿಕಿರಿ ಉಂಟಾಗುತ್ತದೆ. ಹೀಗಾಗಿ ಪಟಾಕಿಗಳನ್ನು ತ್ಯಜಿಸೋಣ. ದೀಪದಿಂದ ದೀಪ ಹಚ್ಚಿ ಪರಿಸರ ಸ್ನೇಹಿ ದೀಪಾವಳಿ ಆಚರಿಸೋಣ ಎಂದು ಈಶ್ವರ ಖಂಡ್ರೆ ಕರೆ ನೀಡಿದ್ದಾರೆ.

‘ಹೈದರಾಬಾದ್ ಪಬ್’ನಲ್ಲಿ ಅಶ್ಲೀಲ ನೃತ್ಯ: 42 ಮಹಿಳೆಯರು ಸೇರಿ 100ಕ್ಕೂ ಹೆಚ್ಚು ಮಂದಿ ಬಂಧನ

ಮಂಡ್ಯ ಉದ್ಯೋಗ ಮೇಳದಲ್ಲಿ 1,122 ಯುವಜನರಿಗೆ ನೇರ ಉದ್ಯೋಗ, ಒಟ್ಟು 6,150 ಅರ್ಜಿ ಸ್ವೀಕಾರ-HDK

Share. Facebook Twitter LinkedIn WhatsApp Email

Related Posts

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

2 Mins Read

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

1 Min Read

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

1 Min Read
Recent News

​ಆರ್‌ ಜಿ ಕರ್ ಪ್ರಕರಣಕ್ಕೆ ಕಲ್ಕತ್ತಾ ಹೈಕೋರ್ಟ್ ಬಿಗ್ ಟ್ವಿಸ್ಟ್!: ಹೊಸ CBI ತಂಡ ರಚನೆಗೆ ಆದೇಶ : ಜೂನ್ 25 ರೊಳಗೆ ವರದಿ ಸಲ್ಲಿಸಲು ಗಡುವು!

BREAKING: ‘ಸೌಂದರ್ಯ ಕ್ಲಿನಿಕ್‌’ಗಳಲ್ಲಿ ಇಂಜೆಕ್ಷನ್ ರೂಪದ ಕಾಸ್ಮೆಟಿಕ್ಸ್ ಬಳಸುವಂತಿಲ್ಲ: ಕೇಂದ್ರ ಸರ್ಕಾರದ ಮಹತ್ವದ ಆದೇಶ

ಇಟಲಿ ಪ್ರಧಾನಿ ಮೆಲೋನಿಗೆ ಮೋದಿ ಉಡುಗೊರೆ! — ಅಸ್ಸಾಂನ ಚಿನ್ನದ ರೇಷ್ಮೆ ಮತ್ತು ಶಾಸ್ತ್ರೀಯ ಸಂಗೀತದ ಜುಗಲ್‌ಬಂದಿ!

Forget just water: ಬಿಸಿಲಿನ ಬೇಗೆಗೆ ಆಯುಷ್ ‘ಕೂಲ್’ ಟಿಪ್ಸ್: ಹೀಗಿರಲಿ ನಿಮ್ಮ ಬೇಸಿಗೆಯ ಆಹಾರ ಪದ್ಧತಿ!

State News
KARNATAKA

ಸಾಗರದ ಅಡ್ಡೇರಿಯಲ್ಲಿ ಬಡ ರೈತರ ಜಮೀನಿಗೆ ನುಗ್ಗಿ ಫಸಲು ಕಿತ್ತಿರುವುದು ಅಮಾನವೀಯ: ಹರತಾಳು ಹಾಲಪ್ಪ ಆಕ್ರೋಶ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಅಡ್ಡೇರಿ ಗ್ರಾಮದ ಬಡ ಕುಟುಂಬದ ಜಮೀನಿಗೆ ನುಗ್ಗಿ, ಬೆಳೆದು ನಿಂತಿದ್ದ ಫಸಲನ್ನು ಕಿತ್ತು ಹಾಕಿರುವುದು…

Rain In Bengaluru: ಬೆಂಗಳೂರಿನ ಹಲವೆಡೆ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ

BREAKING: ಬೆಂಗಳೂರಲ್ಲಿ ಬಿರುಗಾಳಿ ಸಹಿತ ಆಲಿಕಲ್ಲು ಮಳೆ: ನಮ್ಮ ಮೆಟ್ರೋ ಸಂಚಾರ ಸ್ಥಗಿತ | Namma Metro

ಏಸೂರು ಬಿಟ್ಟರು ಬೇಸೂರು ಬಿಡೆವು: ಮಾಜಿ ಸಚಿವ ಹಾಲಪ್ಪ ಹರತಾಳು ಎಚ್ಚರಿಕೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.