ಬೆಂಗಳೂರು : ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ವೋಟರ್ ಐಡಿ ಹಗರಣ ಪ್ರಕರಣ ಈ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ್ದೇನೆ ಎಂದು ಬೆಂಗಳೂರಿನಲ್ಲಿ ಮಾಜಿ ಎಂಎಲ್ಸಿ ತುಳಸಿ ಮುನಿರಾಜು ಗೌಡ ಹೇಳಿಕೆ ನೀಡಿದ್ದಾರೆ.
ದೂರು ನೀಡಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,ತನಿಖೆಗೆ ಐಪಿಎಸ್ ಅಧಿಕಾರಿ ನೇಮಿಸಬೇಕು ಎಂದು ಹೈಕೋರ್ಟ್ ಸೂಚಿಸಿತ್ತು. ಜಾಲಹಳ್ಳಿ ಠಾಣೆಯ ಪೊಲೀಸರು ಪ್ರಕರಣದ ತನಿಖೆಯ ದಿಕ್ಕನ್ನು ತಪ್ಪಿಸುತ್ತಿದ್ದಾರೆ. ಇದರ ಹಿಂದೆ ಆರ್ ಆರ್ ನಗರ ಶಾಸಕ ಮುನಿರತ್ನ ಹಾಗೂ ಅವರ ಪಟಾಲಂ ಇದೆ.
ಪ್ರಕರಣದ ಪ್ರತ್ಯಕ್ಷ ಸಾಕ್ಷಿಗಳಿಗೆ ಶಾಸಕರು, ಬೆದರಿಕೆ ಹಾಕುತ್ತಿದ್ದಾರೆ. ನಾನು ಸಾಕ್ಷಿ ಹೇಳಲು ಹೋದರು ಪೊಲೀಸರು ದಾಖಲಿಸಿಕೊಂಡಿಲ್ಲ. ಬಿಜೆಪಿಯಲ್ಲಿದ್ದರು 6 ವರ್ಷದಿಂದ ನಿರಂತರವಾಗಿ ಹೋರಾಡುತ್ತಿದ್ದೇನೆ. ರಾಜ್ಯ ಪಾಲರು ನ್ಯಾಯಾಧೀಶರಿಗೆ ಪ್ರಕರಣ ಸಂಬಂಧ ದೂರ ಕೊಡುತ್ತೇನೆ.
ಪ್ರಕರಣದ ತನಿಖೆ ಸರಿಯಾಗಿ ನಡೆಯುತ್ತಿಲ್ಲ ಎಂದು ವಿಧಾನ ಪರಿಷತ್ತಿನ ಮಾಜಿ ಸದಸ್ಯ ತುಳಸಿ, ಮುನಿರಾಜು ದೂರು ನೀಡಿದ್ದಾರೆ. ಮೂರ್ನಾಲ್ಕು ವರ್ಷದಿಂದ ಪ್ರಕರಣದ ತನಿಖೆ ನಡೆಸದೆ ವಿಳಂಬ ಮಾಡುತ್ತಿದ್ದಾರೆ ಹೈಕೋರ್ಟ್ ಸೂಚನೆ ನೀಡಿದರೂ ಕೂಡ ಇದುವರೆಗೂ ಆರೋಪ ಪಟ್ಟಿ ಸಲ್ಲಿಸಿಲ್ಲ ಪ್ರಕರಣಕ್ಕೆ ಸಂಬಂಧಪಟ್ಟ ಕಡತವನ್ನು ವಿಚಾರಣಾ ವ್ಯಾಪ್ತಿಯೇ ಇರದ ಕೋರ್ಟ್ನಲ್ಲಿ ಇರಿಸಲಾಗಿದೆ ಎಂದು ಆರೋಪಿಸಿದರು.
ಜಾಲಹಳ್ಳಿ ಪೊಲೀಸರು ಹಿರಿಯ ಅಧಿಕಾರಿಗಳು ಈ ಒಂದು ಪ್ರಕರಣದ ತನಿಖೆಯನ್ನು ಸರಿಯಾಗಿ ನಡೆಸದಿದ್ದರೆ ದೂರು ನೀಡುತ್ತೇನೆ. ಪೊಲೀಸ್ ಆಯುಕ್ತರಿಗೆ ದೂರು ಸಲ್ಲಿಸಿದ ಬಳಿಕ ವಿಧಾನಪರಿಷತ್ ಮಾಜಿ ಸದಸ್ಯ ತುಳಸಿ ಮುನಿರಾಜುಗೌಡ ಹೇಳಿಕೆ ನೀಡಿದರು.