ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಹಕರ ಜಿಲ್ಲಾ ವೇದಿಕೆಗಳಿಗೆ ಅಧ್ಯಕ್ಷರು ಹಾಗೂ ಸದಸ್ಯರ ನೇಮಕಾತಿ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಪತ್ರ ಬರೆದು ಮನವಿ ಮಾಡಿದ್ದಾರೆ.
ಇಂದು ಸಿಎಂ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಕರ್ನಾಟಕ ರಾಜ್ಯ ಸರ್ಕಾರದ ಆಹಾರ ಮತ್ತು ಸಾರ್ವಜನಿಕ ಪಡಿತರ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಗ್ರಾಹಕರ ವೇದಿಕೆಗಳಿಗೆ ರಾಜ್ಯ ಸರ್ಕಾರ ಅಧ್ಯಕ್ಷರು ಮತ್ತು ಸದಸ್ಯರ ನೇಮಕಾತಿಯನ್ನು ನಿಯಮಾನುಸಾರ ಮಾಡಬೇಕಾಗಿರುತ್ತದೆ ಖಾಲಿ ಇರುವ ಅಧ್ಯಕ್ಷರ ಮತ್ತು ಸದಸ್ಯರ ಹುದ್ದೆಗಳಿಗೆ ನೇಮಕಾತಿ ಕೋರಿ ರಾಜ್ಯ ಸರ್ಕಾರಕ್ಕೆ ಕರ್ನಾಟಕ ರಾಜ್ಯ ಗ್ರಾಹಕರ ವ್ಯಾಜ್ಯಗಳ ಆಯೋಗ 02-05-2024 ರಂದು ಪ್ರಸ್ತಾವನೆ ಸಲ್ಲಿಸಿರುತ್ತದೆ ಮುತ್ತದ ನಂತರವೂ ಅನೇಕ ಹುದ್ದೆಗಳು ಖಾಲಿಯಾಗಿದ್ದು ಇಲಿಯವರೆಗೆ ನೇಮಕಾತಿ ಆಗಿರುವುದಿಲ್ಲ ಇದರಿಂದ ವಿವಿಧ ಗ್ರಾಹಕರ ನ್ಯಾಯಾಲಯದಲ್ಲಿ ಸಾವಿರಾರು ಪ್ರಕರಣಗಳು ವಿಚಾರಣೆಗೆ ಬಾಕಿ ಇರುತ್ತದೆ ಎಂದಿದ್ದಾರೆ.
ಕರ್ನಾಟಕ ರಾಜ್ಯ ಗ್ರಾಹಕರ ಆಯೋಗಕ್ಕೆ ಅಧ್ಯಕ್ಷರನ್ನಾಗಿ ಹೈಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಒಬ್ಬರನ್ನು ಕಾಯ್ದೆ ಅಡಿಯಲ್ಲಿ ನೇಮಕ ಮಾಡಬೇಕಾಗಿರುತ್ತದೆ ಕಳೆದ ಐದು ತಿಂಗಳಿಂದ ಆಯೋಗದ ಅಧ್ಯಕ್ಷರ ಹುದ್ದೆಗೆ ನೇಮಕಾತಿ ಆಗಿರುವುದಿಲ್ಲ ಆಯೋಗದ ಅಧ್ಯಕ್ಷರು ತಮ್ಮ ದಿನದಲ್ಲಿ ಬರುವ ಜಿಲ್ಲಾ ಗ್ರಾಹಕ ನ್ಯಾಯಾಲಯಗಳ ಉಸ್ತುವಾರಿಯನ್ನು ನೋಡಿಕೊಳ್ಳುತ್ತಾರೆ ರಾಜ್ಯ ಸರ್ಕಾರವು ಅರ್ಜಿಗಳನ್ನು ಕರೆದು ಖಾಲಿ ಇರುವ ಜಿಲ್ಲಾಧ್ಯಕ್ಷರ ಮತ್ತು ಸದಸ್ಯರ ನೇಮಕಾತಿಯನ್ನು ಮಾಡಬೇಕಾಗಿರುತ್ತದೆ ಖಾಲಿ ಇರುವ ಸ್ಥಾನಗಳನ್ನು ಅರ್ಜಿ ಕರೆದು ರಾಜ್ಯ ಸರ್ಕಾರ ಭರ್ತಿ ಮಾಡಿದ್ದಾರೆ ಗ್ರಾಹಕರ ವಿವಾದಗಳು ಕಾಲಮಿತಿಯೊಳಗೆ ಪರಿಹರಿಸಲು ಸಾಧ್ಯವಾಗುತ್ತದೆ. ರಾಜ್ಯ ಸರ್ಕಾರವು ಹಲವಾರು ಬಾರಿ ಸೂಚನೆಗಳನ್ನು ನೀಡಿದರು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ವೈಫಲ್ಯದಿಂದ ಖಾಲಿ ಇರುವ ಗ್ರಾಹಕ ನ್ಯಾಯಾಲಯದ ಅಧ್ಯಕ್ಷರ ಮತ್ತು ಸದಸ್ಯರ ಹುದ್ದೆಗಳು ಭರ್ತಿ ಆಗಿರುವುದಿಲ್ಲ ಎಂದು ಹೇಳಿದ್ದಾರೆ.
ಆದಕಾರಣ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಿ ಕೂಡಲೇ ಖಾಲಿ ಇರುವ ಜಿಲ್ಲಾ ಗ್ರಾಹಕರ ವೇದಿಕೆ ನ್ಯಾಯಾಲಯಗಳಿಗೆ ಅಧ್ಯಕ್ಷರ ಮತ್ತು ಸದಸ್ಯರ ನೇಮಕಾತಿಗೆ ಕ್ರಮ ಕೈಗೊಳ್ಳಲು ಸೂಚಿಸಬೇಕಾಗಿ ಕೋರುತ್ತೇನೆ. ರಾಜ್ಯ ಗ್ರಾಹಕರ ವ್ಯಾಜ್ಯಗಳ ಆಯೋಗಕ್ಕೆ ಕಾನೂನು ಇಲಾಖೆಯ ಪ್ರಸ್ತಾವನೆಯ ಮುಖಾಂತರ ರಾಜ್ಯ ಹೈಕೋರ್ಟ್ ನ ಸಲಹೆ ಮತ್ತು ಅಭಿಪ್ರಾಯದೊಂದಿಗೆ ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರೊಬ್ಬರನ್ನು ಅಧ್ಯಕ್ಷರನ್ನಾಗಿ ನೇಮಿಸಲು ಕೋರುತ್ತೇನೆ. ನಿಗದಿತ ಸಮಯದಲ್ಲಿ ಖಾಲಿ ಇರುವ ಹುದ್ದೆಗಳನ್ನು ತುಂಬಿದರೆ ಪ್ರಕರಣಗಳ ಇತ್ಯರ್ಥಕ್ಕೆ ಅನುಕೂಲವಾಗುತ್ತದೆ ಎಂಬುದಾಗಿ ತಿಳಿಸಿದ್ದಾರೆ.
BREAKING: ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ 66 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ | Jharkhand Elections