ಬೆಂಗಳೂರು : ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರಿಗೆ ಅಯೋಗ್ಯ ಎಂದು ಅವಹೇಳನಕಾರಿ ಪದ ಬಳಕೆ ಮಾಡಿದ್ದರ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಚಕ್ರವರ್ತಿ ಸೂಲಿಬೆಲೆ ಅವರ ಪ್ರಕರಣಕ್ಕೆ ತಡೆ ನೀಡಿ ಆದೇಶ ಹೊರಡಿಸಿದೆ.
ವಿಚಾರಣೆ ವೇಳೆ ಅರ್ಜಿದಾರ ಚಕ್ರವರ್ತಿ ಸೂಲಿಬೆಲೆ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಅರುಣ್ ಶ್ಯಾಮ್, ಈ ಪ್ರಕರಣ ಕಾನೂನಿನ ಸ್ಪಷ್ಟ ದುರ್ಬಳಕೆಯಾಗಿದೆ. ಹಾಗಾಗಿ, ತಡೆ ನೀಡಬೇಕು. ಅಲ್ಲದೆ, ಸದ್ಯ ಕರ್ನಾಟಕ ಹೈಕೋರ್ಟ್ ಅರ್ಧ ಪ್ರಕರಣವನ್ನು ಮುಕ್ತಾಯಗೊಳಿಸಿದ್ದು, ಇನ್ನರ್ಧ ವಿಚಾರಣೆ ಬಾಕಿ ಇದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಚಕ್ರವರ್ತಿ ಸೂಲಿಬೆಲೆ ಸಲ್ಲಿಸಿದ್ದ ಅರ್ಜಿಯು ನ್ಯಾಯಮೂರ್ತಿಗಳಾದ ಎಂ.ಎಂ. ಸುಂದರೇಶ್ ಮತ್ತು ಪಂಕಜ್ ಮಿತ್ತಲ್ ಅವರಿದ್ದ ವಿಭಾಗೀಯ ಪೀಠದ ವಾದ ಮಂಡಿಸಲಾಯಿತು. ಕೆಲ ಕಾಲ ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಬಳಿಕ ನ್ಯಾಯಾಲಯ, ಪ್ರಕರಣದ ವಿಚಾರಣೆಗೆ ಮಧ್ಯಂತರ ತಡೆ ನೀಡಿ ಪ್ರತಿವಾದಿಗಳಿಗೆ ನೋಟಿಸ್ ನೀಡಿ ವಿಚಾರಣೆ ಮುಂದೂಡಿತು.
ಪ್ರಕರಣ ಹಿನ್ನೆಲೆ?
ಕಳೆದ ಜನವರಿ ಎಂದು ರಾಯಚೂರಿನಲ್ಲಿ ನಮೋ ಭಾರತ್ ಕಾರ್ಯಕ್ರಮದಲ್ಲಿ ಚಕ್ರವರ್ತಿ ಸೂಲಿಬೆಲೆ ಅವರು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಅಯೋಗ್ಯ ಎಂದು ಪರಬಳಸಿ ಅವಹೇಳನ ಪದ ಬಳಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಲಬುರ್ಗಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಗದೀಯೋ ಗುತ್ತೇದಾರ್ ಅವರು ಎಸ್ ಸಿ ಎಸ್ ಟಿ ದೌರ್ಜನ್ಯ ಕಾಯ್ದೆ ಅಡಿ ಪ್ರಕರಣ ದಾಖಲಿಸಿದ್ದರು.
ಈ ಕುರಿತಂತೆ ಪೊಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದ್ದರು.
ಅದನ್ನು ಪ್ರಶ್ನಿಸಿ ಚಕ್ರವರ್ತಿ ಸೂಲಿಬೆಲೆ ಅವರು ರಾಜ್ಯ ಹೈಕೋರ್ಟ್ ಮೊರೆ ಹೋಗಿದ್ದಾಗ ನ್ಯಾಯಾಲಯ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯಿದೆಯಡಿ ಆರೋಪ ರದ್ದುಗೊಳಿಸಿತ್ತು. ಆದರೆ ಭಾರತೀಯ ದಂಡ ಸಂಹಿತೆ ಸೆಕ್ಷನ್ 153 A & B ಮತ್ತು 505ರ ಅಡಿ ತನಿಖೆ ಮುಂದುವರಿಕೆಗೆ ಆದೇಶ ನೀಡಿತ್ತು. ಅದನ್ನು ಪ್ರಶ್ನಿಸಿ ಸೂಲಿಬೆಲೆ ಸುಪ್ರೀಂಕೋರ್ಟ್‌ನ ಮೊರೆ ಹೋಗಿದ್ದರು. ಇದೀಗ ಈ ಒಂದು ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ.